ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಗೋಪೂಜೆ

| Published : Oct 24 2025, 01:00 AM IST

ಸಾರಾಂಶ

ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದೀಪಾವಳಿ ಮತ್ತು ಬಲಿಪಾಡ್ಯಮಿಯ ಪ್ರಯುಕ್ತ ಜನಾರ್ದನ ದೇವಸ್ಥಾನದ ಬಳಿ ಗೋಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕಾಪು

ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದೀಪಾವಳಿ ಮತ್ತು ಬಲಿಪಾಡ್ಯಮಿಯ ಪ್ರಯುಕ್ತ ಜನಾರ್ದನ ದೇವಸ್ಥಾನದ ಬಳಿ ಗೋಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ನೀತಾ ಗುರುರಾಜ್, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕಾಪು ಮಂಡಲ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.