ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಅಧ್ಯಕ್ಷತೆ ವಹಿಸಿದ್ದ ಶ್ರೀ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಮಾತನಾಡಿ, ವಿದ್ಯಾರ್ಥಿ ಪರಿಷತ್‌ನ ಸದಸ್ಯರು ಸಂಸ್ಥೆಯ ಮೇಲೆ ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು. ಪ್ರಾಂಶುಪಾಲ ಡಾ. ನಾಗರಾಜ್ ಭಟ್, ನೂತನ ವಿದ್ಯಾರ್ಥಿ ಪರಿಷತ್ ಸಂಸ್ಥೆ ಮತ್ತು ಸಮಾಜಕ್ಕೆ ಪ್ರಯೋಜನವಾಗುವಂತಹ ಕಾರ್ಯಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸಿದರು.
ಕಾಪು: ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಶ್ರೀ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಮಾತನಾಡಿ, ವಿದ್ಯಾರ್ಥಿ ಪರಿಷತ್‌ನ ಸದಸ್ಯರು ಸಂಸ್ಥೆಯ ಮೇಲೆ ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು. ಪ್ರಾಂಶುಪಾಲ ಡಾ. ನಾಗರಾಜ್ ಭಟ್, ನೂತನ ವಿದ್ಯಾರ್ಥಿ ಪರಿಷತ್ ಸಂಸ್ಥೆ ಮತ್ತು ಸಮಾಜಕ್ಕೆ ಪ್ರಯೋಜನವಾಗುವಂತಹ ಕಾರ್ಯಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸಿದರು.ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಡಾ. ದೀಪಿಕಾ ಬಿ ವಿ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಶ್ರೀ ಚಿರಾಗ್ ಪೂಜಾರಿ ಸ್ವಾಗತಿಸಿದರು.ವಿದ್ಯಾರ್ಥಿ ಪರಿಷತ್ತಿನ ಚುನಾವಣೆಗಾಗಿ “ಧ್ವನಿ” ಚುನಾವಣಾ ಪೋರ್ಟಲನ್ನು ಅಭಿವೃದ್ಧಿಪಡಿಸಿದ ವಿದ್ಯಾರ್ಥಿಗಳಾದ ಅಭಿಷೇಕ್ ಕಿಣಿ, ತೇಜಸ್ ನಾಯಕ್, ಭೂಷಣ್ ಪೂಜಾರಿ ಮತ್ತು “ಉತ್ಕರ್ಷ್” ಕಾಲೇಜಿನ ಮಾಧ್ಯಮ ತಂಡ ನೂತನ ವಿದ್ಯಾರ್ಥಿ ಪರಿಷತ್ ಸದಸ್ಯರನ್ನು ಅಭಿನಂದಿಸಲಾಯಿತು.