ಸಾರಾಂಶ
ಐಟಿಐ, ಸ್ನಾತಕೋತ್ತರ, ಎಂಬಿಎ, ಎಂಜಿನಿಯರಿಂಗ್, ಇನ್ನಿತರ ಪದವೀಧರ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಐಟಿ, ಬಿಟಿ, ಆಟೋಮೊಬೈಲ್, ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್‌ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಇತ್ಯಾದಿ ಕ್ಷೇತ್ರಗಳ ಉದ್ಯೋಗಾವಕಾಶಗಳಿಗೆ ಈ ಮೇಳದಲ್ಲಿ ಆಯ್ಕೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಕಾಪುಕೆಪಿಸಿಸಿಯ ಉಡುಪಿ ಜಿಲ್ಲಾ ಪ್ರಚಾರ ಸಮಿತಿ ವತಿಯಿಂದ ಅ.11ರಂದು ಬೃಹತ್ ಉದ್ಯೋಗ ಮೇಳವನ್ನು ಇಲ್ಲಿನ ದಂಡತೀರ್ಥ ಪಿ.ಯು. ಕಾಲೇಜಿನಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 3ರ ವರೆಗೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ನೀಡುವುದಕ್ಕಾಗಿ ರಾಜ್ಯದ 50ಕ್ಕೂ ಹೆಚ್ಚಿನ ಪ್ರತಿಷ್ಟಿತ ಕಂಪನಿಗಳು ಭಾಗವಹಿಸುತ್ತವೆ ಎಂದರು.
ಐಟಿಐ, ಸ್ನಾತಕೋತ್ತರ, ಎಂಬಿಎ, ಎಂಜಿನಿಯರಿಂಗ್, ಇನ್ನಿತರ ಪದವೀಧರ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಐಟಿ, ಬಿಟಿ, ಆಟೋಮೊಬೈಲ್, ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್‌ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಇತ್ಯಾದಿ ಕ್ಷೇತ್ರಗಳ ಉದ್ಯೋಗಾವಕಾಶಗಳಿಗೆ ಈ ಮೇಳದಲ್ಲಿ ಆಯ್ಕೆ ನಡೆಯಲಿದೆ. ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 10 ರೆಸ್ಯೂಮ್ (ವೈಯುಕ್ತಿಕ ವಿವರ ಪತ್ರ)ಗಳನ್ನು ತರತಕ್ಕದ್ದು. ಅಭ್ಯರ್ಥಿಗಳು ಬಯಸಿದ ಕಂಪನಿಗೆ ಸಂದರ್ಶನ ನೀಡಲು ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅದೇ ದಿನ ಕಂಪನಿಗಳು ನೇಮಕಾತಿ ಪತ್ರ ನೀಡಲಿವೆ ಎಂದು ತಿಳಿಸಿದರು. ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ, ಪದವಿಪೂರ್ವ ಕಾಲೇಜಿನ ಮತ್ತು ಪದವಿ ಕಾಲೇಜಿನ ಅಭ್ಯರ್ಥಿಗಳು ಭಾಗವಹಿಸಬಹುದು, ಅಲ್ಲದೆ ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಚಾರ ನೀಡಿ, ಉದ್ಯೋಗಾರ್ಥಿಗಳು ಸಂದರ್ಶನಕ್ಕೆ ಬರುವಂತೆ ಮಾಡಬಹುದು ಎಂದು ಸೊರಕೆ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ವೈ. ಸುಕುಮಾರ್, ಜಿತೇಂದ್ರ ಪುಟಾರ್ಡೋ, ಕಾಪು ದಿವಾಕರ ಶೆಟ್ಟಿ, ಹರೀಶ್ ಕಿಣಿ, ಶ್ರೀನಿವಾಸ್ ಉಪಸ್ಥಿತರಿದ್ದರು.