ಕಾವೇರಿ ತೀರ್ಥೋದ್ಭವ; 17 ರಂದು ಕಾವೇರಿ ಮಾತೆಗೆ ಪೂಜೆ ಕಾರ್ಯಕ್ರಮ

| Published : Oct 16 2025, 02:00 AM IST

ಕಾವೇರಿ ತೀರ್ಥೋದ್ಭವ; 17 ರಂದು ಕಾವೇರಿ ಮಾತೆಗೆ ಪೂಜೆ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಶ್ರೀ ಕಾವೇರಿ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಅವರು ಶ್ರೀ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಜಿ ಸಂಸದೆ ಸುಮಲತಾ ಅವರು ಶ್ರೀ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.

ಕನ್ನಡಪ್ರಭ ವಾರ್ತೆ ಮಂಡ್ಯ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಪ್ರಯುಕ್ತ ಅ.17 ರಂದು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಮಂಡ್ಯದ ಕಾವೇರಿ ಮಾತೆಗೆ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನವನದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸುವುದರ ಜೊತೆಗೆ ಅಭಿನಂದನಾ ಸಮಾರಂಭ ಹಾಗೂ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಆದಿಚುಂಚನಗಿರಿ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿ ಶಾಖಾಮಠ ಪುರುಷೋತ್ತಮಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವ ಕೆ.ಎಚ್.ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರನ್ನು ಅಭಿನಂದಿಸುವರು. ಶಾಸಕ ಪಿ.ರವಿಕುಮಾರ್‌ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಶ್ರೀ ಕಾವೇರಿ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಅವರು ಶ್ರೀ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಜಿ ಸಂಸದೆ ಸುಮಲತಾ ಅವರು ಶ್ರೀ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು ಎಂದು ವಿವರಿಸಿದರು.

ಅಭಿನಂದಿತರ ಕುರಿತು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಮಾತನಾಡಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಬಿ.ರಾಮಕೃಷ್ಣ, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಉಪಾಧ್ಯಕ್ಷ ಅರುಣ್‌ಕುಮಾರ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ.ಟಿ.ಜಗದೀಶ್, ಸಹಕಾರ್ಯದರ್ಶಿ ಬಿ.ಎಂ.ದೇವೇಗೌಡ, ಖಜಾಂಚಿ ವೈ.ಸಿ.ನವೀನ್, ಪ್ರಧಾನ ಸಂಚಾಲಕ ದ.ಕೋ.ಹಳ್ಳಿ ಚಂದ್ರಶೇಖರ್ ಇದ್ದರು.