ಸಾರಾಂಶ
ಹರಿಹರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
- ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು - - - ಕನ್ನಡಪ್ರಭ ವಾರ್ತೆ ಹರಿಹರ
ಇಲ್ಲಿಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.ಕಳೆದ ಐದಾರು ತಿಂಗಳಿಂದ ಜನಪ್ರತಿನಿಧಿಗಳ ಅಧಿಕಾರವಿಲ್ಲದೇ, ಜಿಲ್ಲಾಧಿಕಾರಿ ಅವರೇ ನಗರಸಭೆ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೀಸಲಾತಿ ಅನ್ವಯ ಕೇವಲ ಜೆಡಿಎಸ್ ಪಕ್ಷದ ಕವಿತಾ ಮಾರುತಿ ಬೇಡರ್ ಒಬ್ಬರೇ ಮಹಿಳಾ ಸದಸ್ಯರಿದ್ದು ನಗರಸಭೆಯ ಉಳಿದ ಅವಧಿಗೆ ಅವರೇ ಅಧ್ಯಕ್ಷರಾಗುವುದರಲ್ಲಿ ಅನುಮಾನವಿಲ್ಲ.
ಒಂದುವೇಳೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸರ್ಕಾರದ ಈ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೊರೆಹೋದರೆ ಮೀಸಲಾತಿ ವ್ಯತ್ಯಾಸ ನಿರೀಕ್ಷೆ ಮಾಡಬಹುದು. ಇಲ್ಲವಾದಲ್ಲಿ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ.- - - -೫ಎಚ್‌ಆರ್‌ಆರ್೪: ನಗರಸಭೆ ಕಟ್ಟಡ, ಹರಿಹರ.