ಕಾವೂರು ಮಹಾಲಿಂಗೇಶ್ವರ ದೇಗುಲ ಚಪ್ಪರ ಮುಹೂರ್ತ: ಮಾ.1ರಿಂದ ಬ್ರಹ್ಮಕಲಶ

| Published : Feb 18 2025, 12:32 AM IST

ಕಾವೂರು ಮಹಾಲಿಂಗೇಶ್ವರ ದೇಗುಲ ಚಪ್ಪರ ಮುಹೂರ್ತ: ಮಾ.1ರಿಂದ ಬ್ರಹ್ಮಕಲಶ
Share this Article
  • FB
  • TW
  • Linkdin
  • Email

ಸಾರಾಂಶ

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ 9ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಚಪ್ಪರ ಮುಹೂರ್ತ ನಡೆಯಿತು.ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ವೇ.ಮೂ.ಕೆ. ವಾಸುದೇವ ಆಸ್ರಣ್ಣ ಅವರು ಚಪ್ಪರ ಮುಹೂರ್ತ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸುಮಾರು 800 ವರ್ಷಗಳ ಇತಿಹಾಸವಿರುವ ಚೋಳರ ಶೈಲಿಯ ದೇವಾಲಯ ಇದು. ದೇವಳ ಗರ್ಭಗುಡಿ ಜೀರ್ಣೋದ್ಧಾರ, ಅನ್ನಛತ್ರ ನಿರ್ಮಾಣ ಕಾರ್ಯ, ಸುತ್ತುಪೌಳಿ, ಗೋಪುರಗಳನ್ನು ಅಲಂಕಾರಗೊಳಿಸಲಾಗುತ್ತಿದೆ. ಸಪ್ತ ಗ್ರಾಮದೊಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 1982ರಲ್ಲಿ ಜೀರ್ಣೋದ್ಧಾರಗೊಂಡಿತ್ತು. 1996ರಲ್ಲಿ ನೂತನ ಕಲ್ಯಾಣ ಮಂಟಪ, ವಸಂತ ಮಂಟಪ ನಿರ್ಮಾಣಗೊಂಡು ಬ್ರಹ್ಮಕಲಶ, 2004ರಲ್ಲಿ ಬ್ರಹ್ಮರಥ, ಜಳಕದ ಕೆರೆ, 2009ರಲ್ಲಿ ಸುತ್ತುಪೌಳಿ, ಏಕಶಿಲಾ ಧ್ವಜಸ್ತಂಭ ನಿರ್ಮಾಣಗೊಂಡು ಬ್ರಹ್ಮಕಲಶ ನಡೆದಿದೆ.

ಕಾವೂರು ದೇವಸ್ಥಾನದ ಪ್ರಧಾನ ಅರ್ಚಕ ಕೆ.ಶ್ರೀನಿವಾಸ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆಶಿಕ್ ಬಳ್ಳಾಲ್ ಕೂಳೂರುಬೀಡು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಮೋಹನ ಪ್ರಭು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅವಿನಾಶ್ ನಾಯ್ಕ ಪಂಜಿಮುಗೆರುಗುತ್ತು, ಪ್ರ.ಕಾರ್ಯದರ್ಶಿ ಸುಧಾಕರ ಆಳ್ವ, ಕೋಶಾಧಿಕಾರಿ ದೀಪಕ್ ಪೂಜಾರಿ, ರಾಮಣ್ಣ ಶೆಟ್ಟಿ ಮುಗಿಪು, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಇದ್ದರು.