ಕಾಯಕ ಶರಣರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

| Published : Feb 04 2024, 01:32 AM IST

ಕಾಯಕ ಶರಣರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲೂಕು ಮಟ್ಟದಲ್ಲಿ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಯಾದಗಿರಿ:

ಕಾಯಕ ಶರಣರ ಜಯಂತ್ಯುತ್ಸವ ಜಿಲ್ಲೆಯಾದ್ಯಂತ ಫೆ.10ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ಡಿಸಿ ಕಚೇರಿ ಸಭಾಂಗಣದಲ್ಲಿ ಜಯಂತಿ ಆಚರಣೆ ಕುರಿತು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಜಿಲ್ಲಾಡಳಿತ ಭವನ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ, ಕಾರ್ಯ ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಅತಿಥಿ ಗಣ್ಯರ, ನುರಿತ ಉಪನ್ಯಾಸಕರ ಆಹ್ವಾನಿಸುವುದು ಸೇರಿ ಎಲ್ಲಾ ರೀತಿಯ ಸೌಕರ್ಯ, ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ತಿಳಿಸಿದರು.ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲೂಕು ಮಟ್ಟದಲ್ಲಿ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು. ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಮುಖಂಡರಾದ ಮರೆಪ್ಪ ಚಟ್ಟೆರಕರ್, ಸೈದಪ್ಪ ಕೂಲೂರ, ಗೋಪಾಲ ಎಸ್. ತಳಿಗೇರಿ, ವಿಜಯ್ ಭರತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ತುಳಸಿರಾಮ್ ಸೇರಿ ಇತರರಿದ್ದರು.