ಭಾರತದ 5ನೇ ಪ್ರಧಾನಿ ಚೌದರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರೈತರ ದಿನವನ್ನಾಗಿ ಆಚರಿಸಲಾಗುತ್ತಿದೆ. ರೈತರಿಗಾಗಿ ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದ ಕೀರ್ತಿ ಚರಣ್ ಸಿಂಗ್ ಅವರಿಗೆ ಸಲ್ಲುತ್ತದೆ.
ಕನ್ನಡಪ್ರಭ ವಾರ್ತೆ ಮದ್ದೂರು
ದುಡಿಮೆಯೆ ದೇವರೆಂದು ನಂಬಿ ಹಗಲಿರಳು ಭೂಮಿ ತಾಯಿಯ ಸೇವೆ ಸಲ್ಲಿಸಿ ಇಡಿ ಜಗತ್ತಿಗೆ ಅನ್ನ ನೀಡುವ ಕಾಯಕ ಯೋಗಿಯ ಬದುಕು ಸದಾ ಹಸನಾಗಲುವಂತೆ ಮಾಡಲು ಆಳುವ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಒತ್ತಾಯಿಸಿದರು.ನಗರದ ಮಳವಳ್ಳಿ ರಸ್ತೆಯ ವಿಶ್ವ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಅವರ ಪುತ್ಥಳಿಗೆ ವಿಶ್ವ ರೈತ ದಿನಾಚರಣೆ ಅಂಗವಾಗಿ ವೇದಿಕೆಯಿಂದ ಪುಷ್ಪಾರ್ಚನೆ ಮಾಡಿ ಮಾತನಾಡಿ, ಭಾರತದ 5ನೇ ಪ್ರಧಾನಿ ಚೌದರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರೈತರ ದಿನವನ್ನಾಗಿ ಆಚರಿಸಲಾಗುತ್ತಿದೆ. ರೈತರಿಗಾಗಿ ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದ ಕೀರ್ತಿ ಚರಣ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದರು.
ದೇಶದ ಬೆನ್ನೆಲುಬು, ಅನ್ನ ನೀಡುವ ಅನ್ನದಾತರು ಪ್ರಕೃತಿಗೆ ಅವಲಂಬಿತರಾಗಿ ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಬೆಳೆ ಬೆಳೆದು ಹಸಿವನ್ನೂ ನೀಗಿಸುವ ಶ್ರಮಿಕ ಜೀವಿ ರೈತ ನಮ್ಮ ದೇಶದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾಗಿದೆ ಎಂದರು.ಈ ವೇಳೆ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಒಕ್ಕಲಿಗರ ಸಂಘದ ಅಧ್ಯಕ್ಷ ಶಿವಲಿಂಗೇಗೌಡ, ಗೌರವಾಧ್ಯಕ್ಷ ಶಿವಲಿಂಗಯ್ಯ, ಸಂಘಟನೆ ಮುಖಂಡರಾದ ಹಾಗಲಹಳ್ಳಿ ಬಸವರಾಜು, ಸಕ್ಕರೆ ನಾಗರಾಜು, ಬೆಳತೂರು ಚಂದ್ರಹಾಸ, ವಿ.ಪಿ.ವರದರಾಜು, ಗ್ರಾಪಂ ಮಾಜಿ ಅಧ್ಯಕ್ಷ ಹುಲಿಗೆರೆಪುರ ಮಹದೇವ, ಮಹದೇಶ, ನಾಗರಾಜು, ಹಿರಿಯ ಕಲಾವಿದರಾದ ವಿ.ಕೆ.ರಾಮು, ವೀರಭದ್ರ ಚಾರಿ, ಸತೀಶ್, ಪುಟ್ಟಸ್ವಾಮಿ, ರೈತ ಮುಖಂಡರಾದ ಕೋಣಸಾಲೆ ಲಿಂಗರಾಜು, ಅರಗಿನಮಳೆ ರಾಮಣ್ಣ, ರಾಹುಲ್, ರಾಮಕೃಷ್ಣ ಇದ್ದರು.