ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ

| Published : Feb 08 2024, 01:33 AM IST

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹಾಗೂ ಅಕ್ಕಪಕ್ಕದ ಗಡಿ ಜಿಲ್ಲೆಯ ಗ್ರಾಮಗಳ ವ್ಯಾಪ್ತಿ ಹೊಂದಿದೆ. ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 28 ಸಾವಿರ ಜನಸಂಖ್ಯೆ ಇದ್ದು, ನಿತ್ಯ ನೂರಾರು ಹೊರ ರೋಗಿಗಳು ಸೇರಿದಂತೆ ಇಷ್ಟೂ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆಯನ್ನು ಕಲ್ಪಿಸಲು 5 ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ.

- - ಮೈಸೂರು ಜಿಲ್ಲೆಗೆ ಮೊದಲ ಸ್ಥಾನದ ಹೆಗ್ಗಳಿಕೆಗೆ

ಕನ್ನಡಪ್ರಭ ವಾರ್ತೆ ಭೇರ್ಯ

ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ಒದಗಿಸುತ್ತಾ ಬರುತ್ತಿರುವ ಸಾಲಿಗ್ರಾಮ ತಾಲೂಕಿನ ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಮೈಸೂರು ಜಿಲ್ಲೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆಗೆ ಪಾತ್ರವಾಗಿ ಕಾಯಕಲ್ಪ ಯೋಜನೆಯ ಪ್ರಶಸ್ತಿಗೆ ಭಾಜನವಾಗಿದೆ.

ಖಾಸಗಿ ಆಸ್ಪತ್ರೆಗಿಂತ ಹೆಚ್ಚಿನ ಗುಣಮಟ್ಟದಲ್ಲಿ ರೋಗಿಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವುದರ ಜೊತೆಗೆ ಸಮರ್ಪಕ ರೀತಿಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಬರುತ್ತಿದೆ.

ಅತೀ ಹೆಚ್ಚು ಜನಸಂಖ್ಯೆ

ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹಾಗೂ ಅಕ್ಕಪಕ್ಕದ ಗಡಿ ಜಿಲ್ಲೆಯ ಗ್ರಾಮಗಳ ವ್ಯಾಪ್ತಿ ಹೊಂದಿದೆ. ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 28 ಸಾವಿರ ಜನಸಂಖ್ಯೆ ಇದ್ದು, ನಿತ್ಯ ನೂರಾರು ಹೊರ ರೋಗಿಗಳು ಸೇರಿದಂತೆ ಇಷ್ಟೂ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆಯನ್ನು ಕಲ್ಪಿಸಲು 5 ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ವರ್ಷಗಳ ಕಾಲ ಆರೋಗ್ಯ ಸಿಬ್ಬಂದಿ ಹಾಗೂ ಕಾಯಂ ವೈದ್ಯರು ಇಲ್ಲದೆ ಸ್ವಚ್ಛತೆ ಮರೀಚಿಕೆಯಾಗಿತ್ತು. ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಯು ಸ್ವಚ್ಛತೆಯಿಂದ ಕೂಡಿ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಲಾಗುತ್ತಿದೆ.

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿ ಹಾಗೂ ಎರಡು ಲಕ್ಷ ರು. ನಗದು ಬಹುಮಾನ ನೀಡಿ ಗೌರವಿಸಿತು.

ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾಯಕಲ್ಪ ರಾಜ್ಯ ಮಟ್ಟದ ಪ್ರಶಸ್ತಿ ಸಮಾರಂಭದಲ್ಲಿ ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿ ದೊರೆತಿದೆ. ಭೇರ್ಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸೌಜನ್ಯ ಆಸ್ಪತ್ರೆಯ ಸಿಬ್ಬಂದಿಗಳೊಡನೆ ಪ್ರಶಸ್ತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಪಡೆದುಕೊಂಡರು.

ರಾಷ್ಟ್ರೀಯ ಮಟ್ಟದಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲೂಕಿನಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಮಾಡುವ ಹಂಬಲ ಹೊಂದಿದ್ದೇನೆ, ಮೊದಲ ಆದ್ಯತೆ ಸ್ವಚ್ಚತೆ, ಸುರಕ್ಷಿತೆ, ಶುದ್ದ ಕುಡಿಯುವ ನೀರು, ಅನೇಕ ವೈದ್ಯಕೀಯ ಸೌಲಭ್ಯಗಳನ್ನು ಸೇರಿದಂತೆ ಎಲ್ಲವನ್ನೂ ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲೆಯಲ್ಲಿ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿರುವ ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲರನ್ನು ಅಭಿನಂದಿಸುತ್ತೇನೆ.

- ಡಾ.ಡಿ. ನಟರಾಜು, ತಾಲೂಕು ಆರೋಗ್ಯಾಧಿಕಾರಿ, ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕು.