ಸಾರಾಂಶ
ಮಂಡ್ಯ ತಾಲೂಕು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಆರ್‌ಎಪಿಸಿಎಂಎಸ್ ನಿರ್ದೇಶಕ ಕೆ.ಸಿ.ರವೀಂದ್ರ ಮತ್ತು ಉಪಾಧ್ಯಕ್ಷರಾಗಿ ಸಿ.ಬಿ ಕೃಷ್ಣೇಗೌಡ ಅವಿರೋಧ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಆರ್‌ಎಪಿಸಿಎಂಎಸ್ ನಿರ್ದೇಶಕ ಕೆ.ಸಿ.ರವೀಂದ್ರ ಮತ್ತು ಉಪಾಧ್ಯಕ್ಷರಾಗಿ ಸಿ.ಬಿ ಕೃಷ್ಣೇಗೌಡ ಅವಿರೋಧ ಆಯ್ಕೆಯಾದರು.11 ಮಂದಿ ನಿರ್ದೇಶಕರ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದಿಂದ ಚುನಾಯಿತದಾಗಿದ್ದ ಕಲ್ಲಹಳ್ಳಿ ಕೆ.ಸಿ.ರವೀಂದ್ರ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಚಿಕ್ಕಮಂಡ್ಯ ಸಿ.ಬಿ.ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದ ಮುಡಾ ನಿರ್ದೇಶಕ ಎಂ.ಕೃಷ್ಣ ಮಾತನಾಡಿ, ಸಹಕಾರ ಸಂಘದ ಸರ್ವತೋಮುಖ ಅಭಿವೃದ್ದಿ ದೃಷ್ಠಿಯಿಂದ ಸಂಘದ ವ್ಯಾಪ್ತಿಯ ಗ್ರಾಮಗಳಾದ ಕಲ್ಲಹಳ್ಳಿ, ಹೊಸಹಳ್ಳಿ, ಚಿಂದಗಿರಿದೊಡ್ಡಿ, ಚಿಕ್ಕಮಂಡ್ಯ, ದೇವೇಗೌಡದೊಡ್ಡಿ ಮತ್ತು ನಗರ ವ್ಯಾಪ್ತಿಯ ನಿರ್ದೇಶಕರು ಸರ್ವಾನುಮತದ ಆಯ್ಕೆಗೆ ಸಹಕಾರ ನೀಡಿದ್ದಾರೆ ಎಂದರು.ನೂತನ ಅಧ್ಯಕ್ಷ ಕೆ.ಸಿ. ರವೀಂದ್ರ ಮಾತನಾಡಿ, ಆಡಳಿತ ಮಂಡಳಿ ಹಿಂದಿನ ಅಧ್ಯಕ್ಷರು ಹಾಗೂ ಎಲ್ಲಾ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದು, ರೈತರಿಗೆ ಅನುಕೂಲವಾಗುವ ಸೇವೆ ಸಲ್ಲಿಸುವುದಾಗಿ ತಿಳಿಸಿದರು.
ಈ ವೇಳೆ ಆಡಳಿತ ಮಂಡಳಿ ನಿರ್ದೇಶಕರಾದ ಬೋರೇಗೌಡ, ಎನ್.ನಾಗರಾಜು, ಗೌರಮ್ಮ, ಸುನಂದ, ಡಿ.ಮೋಹನ್, ಎಂ ಆರ್ ಸಂದೀಪ್, ರತ್ನ ಶಿವರಾಜ್, ಧರ್ಮೇಂದ್ರ, ರೇವಣ್ಣ ಹಾಗೂ ಮಾಜಿ ಅಧ್ಯಕ್ಷರಾದ ಬೋರೇಗೌಡ, ಎಂ.ರಮೇಶ್ ಪುಟಲಿಂಗೆ ಗೌಡ ಹಾಗೂ ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು. ಸಿ.ಶೇಖರ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸೋಮಶೇಖರ್, ಹೊಸಹಳ್ಳಿ ಶಿವಲಿಂಗೇಗೌಡ, ಪತ್ರಕರ್ತರಾದ ಎಲ್. ಕೃಷ್ಣ, ಕೆ.ಸಿ.ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.ಬೆಳೆ ವಿಮೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಕೆ.ಆರ್.ಪೇಟೆ:ಪ್ರಸಕ್ತ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ವಿಮೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿದ್ದರೆ 15 ದಿನಗಳ ಒಳಗಾಗಿ ರೈತರು ಕೃಷಿ ಇಲಾಖೆ ಅಥವಾ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಆಕ್ಷೇಪಣೆ ಸಲ್ಲಿಸುವುಂತೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನಲ್ಲಿ ಒಟ್ಟು 4176 ಬೆಳೆ ವಿಮೆ ಅರ್ಜಿಗಳು ತಿರಸ್ಕೃತಗೊಂಡಿವೆ. ತಿರಸ್ಕೃತಗೊಂಡ ಅರ್ಜಿಗಳ ಬಗ್ಗೆ ಮರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆ ಸಲ್ಲಿಸ ಬಯಸುವ ರೈತರು ವಿಮೆಗೆ ನೋಂದಾಯಿಸಿರುವ ಬೆಳೆ ಮಾಹಿತಿಯ ಪಹಣಿ, ಬೆಂಬಲ ಬೆಲೆ ಯೋಜನೆಡಿಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅದರ ರಶೀದಿ ಹಾಗೂ ವಿಮೆಗೆ ನೊಂದಾಯಿತವಾಗಿರುವ ಬೆಳೆಯನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ಮಾರಾಟ ದಾಖಲೆಯನ್ನು ಅರ್ಜಿ ಜೊತೆ ಸಲ್ಲಿಸುವಂತೆ ಸಂತೋಷ್ ಕುಮಾರ್ ತಿಳಿಸಿದ್ದಾರೆ.