ಸಾರಾಂಶ
ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್‌ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
2023- ೨೦೨೪ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ ಪರೀಕ್ಷೆಯಲ್ಲಿ ಮಂಗಳೂರಿನ ಶಕ್ತಿ ವಿದ್ಯಾಸಂಸ್ಥೆಯ ೩ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಕಲಿಯುವ ರೋಹಿತ್ ಕಲ್ಲೂರಾಯ ಎಂಜಿನಿಯರಿಂಗ್‌ನಲ್ಲಿ ೧೯೪ನೇ ರ‍್ಯಾಂಕ್ ಗಳಿಸಿರುತ್ತಾರೆ ಹಾಗೂ ಬಿ ಫಾರ್ಮಾ ಮತ್ತು ಡಿ ಫಾರ್ಮಾದಲ್ಲಿ ೭೩೫ ನೇ ರ‍್ಯಾಂಕ್ ಬಂದಿರುತ್ತದೆ. ಕ್ರಮವಾಗಿ ಹಿತೇಶ್ ಕುಮಾರ್ ಎಂಜಿನಿಯರಿಂಗ್‌ನಲ್ಲಿ ೧೬೫೬ ರ‍್ಯಾಂಕ್ ಮತ್ತು ಪ್ರತೀಕ್ಷಾ ಬಿ.ಪಿ. ೧೬೯೪ ನೇ ರ‍್ಯಾಂಕ್ ಪಡೆದಿದ್ದಾರೆ. ಮಾತ್ರವಲ್ಲದೆ ೨೦೦೦ ದಿಂದ ೪೦೦೦ದ ಒಳಗಡೆ ೫ ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್‌ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು. ಅತೀ ಕಡಿಮೆ ವರ್ಷದಲ್ಲಿ ಅತೀ ಹೆಚ್ಚು ಸಾಧನೆ ಮಾಡಲು ಶ್ರಮಿಸಿದ ಸಂಸ್ಥೆಯ ಉಪನ್ಯಾಸಕ ಮತ್ತು ಇತರ ಸಿಬ್ಬಂದಿ ವರ್ಗಕ್ಕೆ ಶುಭಹಾರೈಸಿದ್ದಾರೆ.ಶಕ್ತಿ ಎಜುಕೇಶನ್ ಟ್ರಸ್ಟ್ ಪ್ರಧಾನ ಸಲಹೆಗಾರರಾದ ರಮೇಶ ಕೆ, ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ, ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಬಬಿತ ಸೂರಜ್, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.