ಅಧಿಕಾರಿಗಳು ಕೆಡಿಪಿ ಸದಸ್ಯರಿಗೆ ಸಭೆಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಅವರನ್ನು ಶಾಸಕರು ಸಮರ್ಥಿಸಿಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಕೆಡಿಪಿ ನಾಮ ನಿರ್ದೇಶಿತ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಖಾಸಗಿ ಹೋಟೆಲ್‌ಗಳ ಉದ್ಯಮಿ ಪರವಾನಗಿ ನವೀಕರಣಗೊಳಿಸದೆ ಅಧಿಕಾರಿಗಳು ಶಾಮೀಲಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ತಾಲೂಕಿನ ಅಧಿಕಾರಿಗಳು ತಾಲೂಕಿನಲ್ಲಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಮತ್ತು ಮಾಹಿತಿ ಕೇಳಿದರೆ ಮಾಹಿತಿಯನ್ನು ನೀಡುತ್ತಿಲ್ಲ ಈ ಬಗ್ಗೆ ಸ್ಥಳೀಯ ಶಾಸಕರು ಅಧಿಕಾರಿಗಳ ಪರವಾಗಿ ಮಾತನಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಬಾವಿಗಿಳಿದು ಶಾಸಕರ ಜೊತೆ ಮಾತಿನ ಚಕಮಕಿ ನಡೆಯಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಅಧಿಕಾರಿಗಳು ಕೆಡಿಪಿ ಸದಸ್ಯರಿಗೆ ಸಭೆಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಅವರನ್ನು ಶಾಸಕರು ಸಮರ್ಥಿಸಿಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಕೆಡಿಪಿ ನಾಮ ನಿರ್ದೇಶಿತ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಸಿ. ಎನ್. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸದಸ್ಯ ಗುರುಪ್ರಸಾದ್, ತಾಲೂಕಿನಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಗಾಂಜಾ, ಡ್ರಗ್ಸ್ ಗುಂಗಿನಲ್ಲಿದ್ದು ಕಾನೂನು ಬಾಹೀರವಾಗಿ ಮಾರಾಟ ಜಾಲ ನಡೆಯುತ್ತಿದ್ದು ಪೊಲೀಸ್ ಇಲಾಖೆ ಮೌನವಹಿಸಿರುವುದು ಸರಿಯಲ್ಲ ಕೂಡಲೇ ಈ ಬಗ್ಗೆ ವಿಚಾರಣೆ ನಡೆಸದಿದ್ದರೆ ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು. ಖಾಸಗಿ ಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿ ತಾಯಿಯಾದ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಪೊಲೀಸ್ ಇಲಾಖೆ ಏನು ಕ್ರಮ ಕೈಗೊಂಡಿದ್ದೀರ? ಖಾಸಗೀ ಶಾಲೆಗಳ ಮುಖ್ಯಸ್ಥರ ಸಭೆಗಳನ್ನು ಮಾಡಿದ್ದೀರ ಈ ಬಗ್ಗೆ ಮಾಹಿತಿ ನೀಡಿ ಎಂದಾಗ ಶಿಕ್ಷಣ ಇಲಾಖೆ ಅಧಿಕಾರಿ ಮಾತನಾಡಿ ಈ ಬಗ್ಗೆ ಈಗಾಗಲೇ ದೂರು ದಾಖಲಾಗಿದ್ದು, ಪ್ರಕರಣ ತನಿಖೆಯ ಹಂತದಲ್ಲಿದ್ದು ಶೀಘ್ರವೇ ಮಾಹಿತಿ ಹೊರ ಬೀಳಲಿದೆ. ಈಗಾಗಲೇ ಶಾಲೆಯ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದು ಮುಂಜಾಗ್ರತ ಕ್ರಮ ವಹಿಸುವಂತೆ ಸೂಚಿಸಿದ್ದೇವೆ ಎಂದರು. ನಂತರ ಮುಂದುವರೆದು ಸದಸ್ಯರು ಮಾತನಾಡಿ ಖಾಸಗಿ ಹೋಟೆಲ್‌ಗಳ ಉದ್ಯಮಿ ಪರವಾನಗಿ ನವೀಕರಣಗೊಳಿಸದೆ ಅಧಿಕಾರಿಗಳು ಶಾಮೀಲಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಕೂಡಲೇ ಖಾಸಗಿ ಹೋಟೆಲ್ ಮಾಲೀಕರ ಸಭೆ ಕರೆಯಬೇಕು, ತಾಲೂಕಿನ ಅಧಿಕಾರಿಗಳು ತಾಲೂಕಿನಲ್ಲಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಮತ್ತು ಮಾಹಿತಿ ಕೇಳಿದರೆ ಮಾಹಿತಿಯನ್ನು ನೀಡುತ್ತಿಲ್ಲ ಈ ಬಗ್ಗೆ ಸ್ಥಳೀಯ ಶಾಸಕರು ಅಧಿಕಾರಿಗಳ ಪರವಾಗಿ ಮಾತನಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಬಾವಿಗಿಳಿದು ಕೆಲ ಕಾಲ ಶಾಸಕರ ಜೊತೆ ಮಾತಿನ ಚಕಮಕಿ ನಡೆಯಿತು.ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ನನ್ನ ಪಾತ್ರ ಪ್ರಮುಖವಾಗಿದೆ. ಆದರೆ ಎಲ್ಲಾ ಅಧಿಕಾರಿಗಳನ್ನು ಗಣನೆಗೆ ತೆಗೆದುಕೊಂಡು ಕೆಲಸ ನಿರ್ವಹಿಸುವುದು ಸೂಕ್ತ. ಆ ಸಲುವಾಗಿ ಎಲ್ಲಾ ಅಧಿಕಾರಿಗಳನ್ನು ಗಣನೆಗೆ ತೆಗೆದುಕೊಳ್ಳುವುದೇ ನನ್ನ ಉದ್ದೇಶವಾಗಿದೆ ಎಂದು ಶಾಸಕ ಸಿಎನ್ ಬಾಲಕೃಷ್ಣ ಸಭೆಯಲ್ಲಿ ಚರ್ಚಿಸಿದರು.ಕೆಡಿಪಿ ಸಭೆಯಲ್ಲಿ ತಮ್ಮನ್ನು ವೈಯಕ್ತಿಕವಾಗಿ ನಿಂದಿಸಿರುವುದು ಸರಿ ಇಲ್ಲ ಎಂದು ಕೆಡಿಪಿ ಸದಸ್ಯ ಮಧು ಆರೋಪವಾಗಿದ್ದು ತಾಲೂಕಿನಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಕುರಿತು ಪ್ರಶ್ನಿಸಿದರೆ ಇದಕ್ಕೆ ಸ್ಥಳೀಯ ಶಾಸಕರು ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಹಣ ವಸೂಲಿ ಮಾಡುತ್ತಿದ್ದೀರಾ ಏನೇನು ಮಾಡುತ್ತಿದ್ದೀರಾ ಎಂದು ನಿಂದನೆ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಕೆಡಿಪಿ ಸದಸ್ಯರ ಆರೋಪವಾಗಿದೆ.ಸರ್ಕಾರದಿಂದ ನೇಮಕಗೊಂಡಿರುವ ಕೆಡಿಪಿ ಸದಸ್ಯರ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ, ಈ ಆರೋಪಗಳನ್ನು ಸ್ಥಳೀಯರು, ಶಾಸಕರು ದೃಢಪಡಿಸಬೇಕು. ಇಲ್ಲದೆ ಹೋದ ಪಕ್ಷದಲ್ಲಿ ಅಧಿಕಾರಿಗಳು ಮುಂದೆ ಶಾಸಕರು ದೃಢಪಡಿಸಬೇಕು ಎಂದು ಸಭೆಯಲ್ಲಿ ಪಟ್ಟು ಹಿಡಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ಸಬ್‌ಇನ್‌ಸ್ಪೆಕ್ಟರ್‌ ರಘುಪತಿ ಭಟ್, ಪುರಸಭಾ ಮುಖ್ಯಾಧಿಕಾರಿ ಯತೀಶ್, ಕೆಡಿಪಿ ಸದಸ್ಯರುಗಳಾದ ಕಬ್ಬಾಳು ಮಹೇಶ್, ಯೋಗೇಶ್, ಮಧುದಡಿಘಟ್ಟ, ಸಮೀಉಲ್ಲಾ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಲ್.ಪಿ. ಪ್ರಕಾಶ್‌ಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಮತ್ತಿತರಿದ್ದರು.