ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ತೀವ್ರ ನಿಗಾವಹಿಸಿ: ಬಿಇಒ ಬಸಣ್ಣವರ

| Published : Dec 27 2024, 12:48 AM IST

ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ತೀವ್ರ ನಿಗಾವಹಿಸಿ: ಬಿಇಒ ಬಸಣ್ಣವರ
Share this Article
  • FB
  • TW
  • Linkdin
  • Email

ಸಾರಾಂಶ

ಕಲಿಕಾ ಪ್ರಕ್ರಿಯೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಶಿಕ್ಷಕ ಸಮೂಹ ತೀವ್ರ ಗಮನ ಹರಿಸುವ ಮೂಲಕ ವಿಶೇಷ ಪರಿಹಾರ ಬೋಧನೆ ಕೈಗೊಂಡು ಪರೀಕ್ಷಾ ವಾಹಿನಿಗೆ ಸನ್ನದ್ಧ ಗೊಳಿಸಿ.

ಕನ್ನಡಪ್ರಭ ವಾರ್ತೆ ಜಮಖಂಡಿ

ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ತೀವ್ರ ನಿಗಾವಹಿಸಬೇಕು. ಪಾಲಕರ ಶ್ರಮ ಹಾಗೂ ವಿದ್ಯಾರ್ಥಿಗಳ ಬದ್ಧತೆಯಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಹೇಳಿದರು.

ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಶೈಕ್ಷಣಿಕ ವ್ಯವಸ್ಥೆ ಪರಿಶೀಲಿಸಿ ಮಾತನಾಡಿದ ಅವರು, ಕಲಿಕಾ ಪ್ರಕ್ರಿಯೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಶಿಕ್ಷಕ ಸಮೂಹ ತೀವ್ರ ಗಮನ ಹರಿಸುವ ಮೂಲಕ ವಿಶೇಷ ಪರಿಹಾರ ಬೋಧನೆ ಕೈಗೊಂಡು ಪರೀಕ್ಷಾ ವಾಹಿನಿಗೆ ಸನ್ನದ್ಧ ಗೊಳಿಸಬೇಕೆಂದರು.

ಶಿಕ್ಷಕರು ಮಕ್ಕಳನ್ನು ಓದುವಂತೆ ಪ್ರೇರೇಪಿಸಿ, ಗುಣಮಟ್ಟದ ಶಿಕ್ಷಣ ನೀಡಬೇಕು. ಜಿಲ್ಲೆಗೆ ಜಮಖಂಡಿ ತಾಲೂಕು ಪ್ರಥಮ ಸ್ಥಾನ ಪಡೆದುಕೊಳ್ಳುವಂತೆ 10ನೇ ತರಗತಿಯ ಫಲಿತಾಂಶ ಬರಬೇಕು. ಅದಕ್ಕಾಗಿ ಶಿಕ್ಷಕರು ಸರ್ಕಾರದ ಎಲ್ಲ ಯೋಜನೆಗಳನ್ನು ಸಮರ್ಪಕ ವಾಗಿ ಜಾರಿ ಗೊಳಿಸಬೇಕೆಂದು ತಿಳಿಸಿದರು. ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಸ್ಥಿತಿಗತಿ ಪರಿಶೀಲಿಸಿದ ಅವರು, ಮಕ್ಕಳಿಗೆ ಪರೀಕ್ಷೆ ಕುರಿತು ಉಪಯುಕ್ತ ಸಲಹೆ ನೀಡಿದರು.

ನೋಡಲ್‌ ಅಧಿಕಾರಿ ಜಿ.ಎಸ್.ವಿಜಾಪೂರ ಮಾತನಾಡಿ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆತರಬೇಕು. ಆ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕು. ಮಕ್ಕಳನ್ನು ಸಾಧ್ಯವಾದಷ್ಟು ಒತ್ತಡ ರಹಿತವಾಗಿ ಪರೀಕ್ಷೆಗೆ ಅಣಿಗೊಳಿಸಬೇಕು ಎಂದರು. ಪ್ರಭಾರಿ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ, ಹಿರಿಯ ವಿಶ್ರಾಂತ ಶಿಕ್ಷಕ ಬಸವರಾಜ ಅನಂತಪೂರ, ಈರಪ್ಪ ದೇಸಾಯಿ, ಲೋಹಿತ ಮಿರ್ಜಿ, ಜಿ.ಆರ್.ಜಾಧವ, ಶ್ರೀಶೈಲ ಹುಣಶಿಕಟ್ಟಿ, ಸಹನಾ ಕಲ್ಯಾಣಿ, ಶೃತಿ ಲಿಗಾಡೆ ಇತರರಿದ್ದರು.