ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ನೀರನ್ನು ಮಿತವಾಗಿ ಬಳಸಬೇಕು. ನೀರು ಅಮೂಲ್ಯ ಸಂಪನ್ಮೂಲವಾಗಿದ್ದು, ಅದರ ಸಂರಕ್ಷಣೆಗೆ ಮಕ್ಕಳು ಸೇರಿದಂತೆ ಎಲ್ಲರೂ ಆದ್ಯತೆ ನೀಡಬೇಕು. ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಎಲ್ಲ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಮಕ್ಕಳಿಗಾಗಿ ಚಿತ್ರಕಲೆ, ಕಸದಿಂದ ಕಲೆ(ವೇಸ್ಟ್ ಟು ಆರ್ಟ್) ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ದಸರಾ ಕಾರ್ಯಕ್ರಮಗಳಲ್ಲಿ ಮಕ್ಕಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ, ತುಮಕೂರು
ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು ಕಲೆ, ಕ್ರೀಡೆ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು.ನಾಡಹಬ್ಬ ತುಮಕೂರು ದಸರಾ-2026 ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗುರುವಾರ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ಮಕ್ಕಳ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ನಮ್ಮ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ನೀರನ್ನು ಮಿತವಾಗಿ ಬಳಸಬೇಕು. ನೀರು ಅಮೂಲ್ಯ ಸಂಪನ್ಮೂಲವಾಗಿದ್ದು, ಅದರ ಸಂರಕ್ಷಣೆಗೆ ಮಕ್ಕಳು ಸೇರಿದಂತೆ ಎಲ್ಲರೂ ಆದ್ಯತೆ ನೀಡಬೇಕು. ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಎಲ್ಲ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಮಕ್ಕಳಿಗಾಗಿ ಚಿತ್ರಕಲೆ, ಕಸದಿಂದ ಕಲೆ(ವೇಸ್ಟ್ ಟು ಆರ್ಟ್) ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ದಸರಾ ಕಾರ್ಯಕ್ರಮಗಳಲ್ಲಿ ಮಕ್ಕಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.ಕನ್ನಿಕಾ ಪರಮೇಶ್ವರಿ ಅವರು ಚಿತ್ರಕಲೆ ಬಿಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಕ್ಕಳ ಚಿತ್ರಕಲೆಗಳನ್ನು ವೀಕ್ಷಿಸಿ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತೆ ಶುಭ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿದ್ದರಾಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.