ಜೂನ್‌ ೨೭ ರಂದು ಹಾಸನ ಕಲಾಭವನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ

| Published : Jun 27 2024, 01:00 AM IST

ಜೂನ್‌ ೨೭ ರಂದು ಹಾಸನ ಕಲಾಭವನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜೂ.೨೭ ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಹಮ್ಮಿಕೊಂಡಿರುವುದಾಗಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ ಮತ್ತು ಕಸಾಪ ಜಿಲ್ಲಾಧ್ಯಕ್ಷ ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಸುದ್ದಿಗೋಷ್ಠಿ । ಜಿ.ಎಲ್.ಮುದ್ದೇಗೌಡ, ಎಚ್.ಎಲ್.ಮಲ್ಲೇಶ್ ಗೌಡ ಮಾಹಿತಿ

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜೂ.೨೭ ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಹಮ್ಮಿಕೊಂಡಿರುವುದಾಗಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ ಮತ್ತು ಕಸಾಪ ಜಿಲ್ಲಾಧ್ಯಕ್ಷ ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು.

ಮಾದ್ಯಮಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರುವಾರ ಬೆಳಿಗ್ಗೆ ೮.೩೦ಕ್ಕೆ ನಗರದ ಎಂ.ಜಿ. ರಸ್ತೆ ಬಳಿ ಇರುವ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೆರವಣಿಗೆಗೆ ಚಾಲನೆ ದೊರಕಲಿದೆ. ನಂತರ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಶ್ರೇಯಸ್ ಎಂ.ಪಟೇಲ್, ಮಾಜಿ ಸಚಿವ ಎಚ್.ಡಿ.ರೇವಣ್ಣ, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶಂಭುನಾಥ ಸ್ವಾಮೀಜಿ, ಬಾಗೂರು ಮಂಜೇಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಮಹಮ್ಮದ್ ಸುಜೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಚ್.ಪಿ.ತಾರಾನಾಥ್, ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಂಬತ್ತು ಜನರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು.

ಶಾಸಕ ಎಚ್.ಪಿ.ಸ್ವರೂಪ್ ಮಾತನಾಡಿ, ಶಂಭುನಾಥ ಸ್ವಾಮೀಜಿ ಆಶೀರ್ವಾದದೊಂದಿಗೆ ಮೆರವಣಿಗೆಯನ್ನು ಶ್ರೀ ಆದಿಚುಂಚನಗಿರಿ ಮುಂಭಾಗದಿಂದ ಪ್ರಾರಂಬಿಸಿ ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾಧಿಕಾರಿ ಚಾಲನೆ ನೀಡಲಿದ್ದಾರೆ. ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವಿವಿಧ ಸಂಘ ಸಂಸ್ಥೆಗಳು ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಎಸ್.ಎಸ್.ರಘುಗೌಡ ಮಾತನಾಡಿ, ಕಳೆದ ಮೂರು ವರ್ಷಗಳಿಂದಲೂ ಕೆಂಪೇಗವಡ ಜಯಂತಿಯನ್ನು ಅದ್ಧೂರಿಯಾಗಿ ಮಾಡಿಕೊಂಡು ಬರಲಾಗುತ್ತಿದೆ. ಈ ಜಿಲ್ಲೆಯ ಎಲ್ಲಾ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದರು.

ನಗರಸಭೆ ಸದಸ್ಯ ನವೀನ್ ಇತರರು ಹಾಜರಿದ್ದರು.