ಸಾರಾಂಶ
ಮಕ್ಕಳಿಗೆ ಮಹಾನ್ ವೀರರ ಇತಿಹಾಸ ತಿಳಿಸಿ ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನೂ ನೀಡಬೇಕು
ಹುಬ್ಬಳ್ಳಿ: ಕೆಂಪೇಗೌಡ ಬೆಂಗಳೂರು ನಗರವನ್ನು ಕಟ್ಟಿ ಬೆಳೆಸಿದರು. ಇಂದು ಬೆಂಗಳೂರು ನಗರ ಸಾಕಷ್ಟು ಅಭಿವೃದ್ಧಿ ಹೊಂದಿ, ಸಿಲಿಕಾನ್ ಸಿಟಿ ಎಂದು ಹೆಸರಾಗಿದೆ ಎಂದು ಹುಬ್ಬಳ್ಳಿ ನಗರ ತಹಸೀಲ್ದಾರ್ ಕಲಗೌಡ ಪಾಟೀಲ ಹೇಳಿದರು.
ತಾಲೂಕಾಡಳಿತ ಸೌಧದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕಾಡಳಿತದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಕ್ಕಳಿಗೆ ಮಹಾನ್ ವೀರರ ಇತಿಹಾಸ ತಿಳಿಸಿ ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನೂ ನೀಡಬೇಕು. ಸ್ಪರ್ಧಾತ್ಮಕ ಜಗತ್ತಿನತ್ತ ಮಕ್ಕಳು ಸಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಬಸವರಾಜ ಹೊಸಮನಿ ಉಪನ್ಯಾಸ ನೀಡಿದರು. ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಜೆ.ಬಿ. ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಬೊಮಕ್ಕನವರ, ತಾಪಂ ವ್ಯವಸ್ಥಾಪಕ ಶಿವಾನಂದ ನಸಬಿ, ಮುಖಂಡರಾದ ಸಂಜೀವ್ ದುಮ್ಮಕನಾಳ, ರಂಜಾನ್ ಕಿಲ್ಲೆದ, ಗೋಪಾಲ್, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.