ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಿರ್ಮಾಣ

| Published : Jun 28 2025, 12:18 AM IST

ಸಾರಾಂಶ

ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು.ಎಲ್ಲ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ

ನವಲಗುಂದ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಕೆಂಪೇಗೌಡ 516ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ಸುಧೀರ್ ಸಾಹುಕಾರ್ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು. ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು.ಎಲ್ಲ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ ಎಂದರು.

ಇದೆ ವೇಳೆ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಕೆಂಪೇಗೌಡರ ಜಯಂತಿ ನಿಮಿತ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು.

ತಾಪಂ ಇಒ ಭಾಗ್ಯಶ್ರೀ ಜಹಗೀರದಾರ, ಸಿಡಿಪಿಒ ಗಾಯತ್ರಿ ಪಾಟೀಲ್, ಕ್ಷೇತ್ರಶಿಕ್ಷಣಾಧಿಕಾರಿ ಎಸ್‌.ಬಿ. ಮಲ್ಲಾಡ, ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ, ಕೃಷ್ಣ ಆರೇರ, ನಾಗರಾಜ್ ಕರಿಸಕ್ರಣ್ಣವರ, ರತ್ನಾ ಸಂಗಟಿ, ನಂದಿನಿ ಹಾದಿಮನಿ, ಶಿವಯೋಗಿ ಜಂಗಣ್ಣವರ ಇತರರು ಪಾಲ್ಗೊಂಡಿದ್ದರು.