ಗ್ರಾಮೀಣ ಜನರ ಆರೋಗ್ಯ ಮತ್ತು ಕೃಷಿ ಚಟುವಟಿಕೆಗೆ ಪೂರಕವಾಗಿ ನೀರು ಒದಗಿಸುವ ದೃಷ್ಠಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿ, ಮಾಹಿತಿ ನೀಡಿದರು. ನಿಡುವಣಿ ಗ್ರಾಮದಲ್ಲಿ ೬೫ ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣ ಹಾಗೂ ನಗರನಹಳ್ಳಿ ಗ್ರಾಮದಲ್ಲಿ ೬೫ ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣ ಮತ್ತು ದೊಡ್ಡಕಾಡನೂರು ಗ್ರಾಮದಲ್ಲಿ ನೀರಾವರಿ ಇಲಾಖೆಯ ೧೨ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮತ್ತು ಸಣ್ಣ ನೀರಾವರಿ ಇಲಾಖೆ ಸುಮಾರು ೧.೫೦ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ನಡೆಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮದ ಕೆಂಪೇಗೌಡರು ಆಸ್ಪತ್ರೆ ನಿರ್ಮಾಣಕ್ಕೆ ಗ್ರಾಮದ ಮಧ್ಯದಲ್ಲಿ ಭೂಮಿ ನೀಡಿದ್ದಾರೆ. ಇಂದಿನ ಸಮಾಜದಲ್ಲಿ ಇವರು ನೀಡಿರುವ ಕೊಡುಗೆ ಪ್ರಶಂಸನೀಯ ಮತ್ತು ಕುಟುಂಬ ಸದಸ್ಯರ ಒಪ್ಪಿಗೆ ಪಡೆದು ನೀಡಿದ್ದಾರೆ. ಆದ್ದರಿಂದ ಕುಟುಂಬದ ಎಲ್ಲಾ ಸದಸ್ಯರ ಕಾರ್ಯವೂ ಅಭಿನಂದನೀಯವೆಂದು ಶಾಸಕ ಎ.ಮಂಜು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ನಗರನಹಳ್ಳಿ ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಮಾತನಾಡಿದರು. ಗ್ರಾಮೀಣ ಜನರ ಆರೋಗ್ಯ ಮತ್ತು ಕೃಷಿ ಚಟುವಟಿಕೆಗೆ ಪೂರಕವಾಗಿ ನೀರು ಒದಗಿಸುವ ದೃಷ್ಠಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿ, ಮಾಹಿತಿ ನೀಡಿದರು. ನಿಡುವಣಿ ಗ್ರಾಮದಲ್ಲಿ ೬೫ ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣ ಹಾಗೂ ನಗರನಹಳ್ಳಿ ಗ್ರಾಮದಲ್ಲಿ ೬೫ ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣ ಮತ್ತು ದೊಡ್ಡಕಾಡನೂರು ಗ್ರಾಮದಲ್ಲಿ ನೀರಾವರಿ ಇಲಾಖೆಯ ೧೨ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮತ್ತು ಸಣ್ಣ ನೀರಾವರಿ ಇಲಾಖೆ ಸುಮಾರು ೧.೫೦ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ನಡೆಸಲಾಗಿದೆ ಎಂದರು.

ನಗರನಹಳ್ಳಿ ಗ್ರಾಪಂ ಆಡಳಿತಾಧಿಕಾರಿ ಹಾಗೂ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ, ಪಿಡಿಒ ಶ್ರೀನಿವಾಸ, ಡಾ. ಸಿಂಚನಾ, ಕಾರ್ಯಪಾಲಕ ಎಂಜಿನಿಯರ್‌ ಕೇಶವಮೂರ್ತಿ, ಸಹಾಯಕ ಕಾರ್ಯನಿವಾರ್ಹಕ ಎಂಜಿನಿಯರ್ ರಾಜೇಶ್, ಸಹಾಯಕ ಎಂಜಿನಿಯರ್ ರವಿ ಕುಮಾರ್ ಟಿ.ಎನ್., ಜೆಡಿಎಸ್ ಮುಖಂಡರಾದ ಪುಟ್ಟಸೋಮಪ್ಪ, ಶಾಂಬಶಿವಪ್ಪ, ಬಸವರಾಜು, ಲಕ್ಕೇಗೌಡ, ಮೆಣಿಗನಹಳ್ಳಿ ಚಂದ್ರಶೇಖರ್‌, ಗುತ್ತಿಗೆದಾರರಾದ ಲೋಕೇಶ್, ಇತರರು ಇದ್ದರು.