ಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ: ಶರಣಬಸಪ್ಪ

| Published : Jun 29 2024, 12:31 AM IST

ಸಾರಾಂಶ

ಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಠಿಣ ಮತ್ತು ಅವಿರತ ಪ್ರಯತ್ನದ ಮೂಲಕ ಜೀವನದಲ್ಲಿ ಉತ್ತಮ ಗುರಿ ಹೊಂದಲು ಸಾಧ್ಯ. ನಿರಂತರ ಅಭ್ಯಾಸ ಮಕ್ಕಳು ಯಶಸ್ವಿಯಾಗಲು ಸಹಕರಿಸುತ್ತದೆ ಎಂದರು.

- ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

ಕನ್ನಡಪ್ರಭ ವಾರ್ತೆ ಯಾದಗಿರಿ

ಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಠಿಣ ಮತ್ತು ಅವಿರತ ಪ್ರಯತ್ನದ ಮೂಲಕ ಜೀವನದಲ್ಲಿ ಉತ್ತಮ ಗುರಿ ಹೊಂದಲು ಸಾಧ್ಯ. ನಿರಂತರ ಅಭ್ಯಾಸ ಮಕ್ಕಳು ಯಶಸ್ವಿಯಾಗಲು ಸಹಕರಿಸುತ್ತದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ವೆಂಕಟರಾವ್ ಕುಲಕರ್ಣಿ, ಶ್ರೇಷ್ಠ ವ್ಯಕ್ತಿಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ. ಹಾಗಾಗಿ ಇತಿಹಾಸದಲ್ಲಿ ನಿಮ್ಮ ಹೆಸರು ಬರಬೇಕಾದರೆ ನೀವು ಶ್ರೇಷ್ಠ ಸಾಧನೆ ಮಾಡಬೇಕು. ಕೆಂಪೇಗೌಡರು ಅನೇಕ ಕೆರೆ ಕಾಲುವೆ ದೇವಸ್ಥಾನ ಕಟ್ಟಿಸಿ ಆಧುನಿಕ ಬೆಂಗಳೂರಿನ ನಿರ್ಮಾತೃವಾಗಿದ್ದರೆ ಎಂದು ನುಡಿದರು.

ಈ ವೇಳೆ ಎಂ.ಜೆ. ಡ್ಯಾನ್ಸ್ ಮತ್ತು ಫಿಟ್ನೆಸ್ ಅಕಾಡೆಮಿ ಮಕ್ಕಳು ಕೆಂಪೇಗೌಡರ ನೃತ್ಯ ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆಸರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೀಶ್ ಎಸ್.ಪಿ., ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಭುಲಿಂಗ ಮಾನಕರ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ, ಎಂ.ಜೆ. ಡ್ಯಾನ್ಸ್ ಮತ್ತು ಫಿಟ್ನೆಸ್ ಅಕಾಡೆಮಿಯ ಸಂಯೋಜಕ ಮಧುಕುಮಾರ್ ಜಿನಕೇರಿ ಇತರರಿದ್ದರು.