ಮೂಲ್ಕಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಾರದರ್ಶಕ ಹೆಜ್ಜೆ ಇಟ್ಟಿದೆ ಎಂದು ಎಐಸಿಸಿ ವೀಕ್ಷಕ ಹಾಗೂ ಕೇರಳ ಶಾಸಕ ಜಯಂತ್ ಹೇಳಿದರು.
ಸುರತ್ಕಲ್‌ನ ಚೊಕ್ಕಬೆಟ್ಟು ಕ್ರಾಸ್ ಬಳಿ ‘ಸಂಘಟನ್ ಸೃಜನ್ ಅಭಿಯಾನ’ದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಕಂಡ ವಿಜಯದ ವೈಭವವನ್ನು ಮರಳಿ ತರಬೇಕಿದೆ ಎಂದರು.ಈ ಗುರಿ ಸಾಧನೆಗೆ ಸ್ಥಳೀಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವವರು ಸಮರ್ಥರಾಗಿರಬೇಕು. ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ಈ ಅಭಿಯಾನ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ತಿಳಿಸಿದರು.ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಸಮಿತಿ ಸದಸ್ಯ ಸತೀಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಸದಾಶಿವ, ವೆರೋನಿಕ ಕರ್ನೇಲಿಯೋ, ಯುವ ಕಾಂಗ್ರೆಸ್ ನವಾಜ್, ಮಾಜಿ ಕಾರ್ಪೊರೇಟರ್ ಅನಿಲ್ ಕುಮಾರ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ಚಿತ್ರಾಪುರ ಸೇರಿದಂತೆ ವಿವಿಧ ಸಮಿತಿಯ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.