ಖಂಡುಗದಹಳ್ಳಿ ಶ್ರೀ ಸೋಮೇಶ್ವರ ಕಾರ್ತಿಕ ಮಹೋತ್ಸವ

| Published : Dec 04 2024, 12:30 AM IST

ಸಾರಾಂಶ

ಇತಿಹಾಸ ಪ್ರಸಿದ್ಧ ಕಡೂರು ತಾಲೂಕಿನ ಖಂಡುಗದಹಳ್ಳಿ ಶ್ರೀ ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ಮೂಲಕ ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾದರು. ಜಾಂಡೇವು ಗಣಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ತಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕಡೂರು

ಇತಿಹಾಸ ಪ್ರಸಿದ್ಧ ಕಡೂರು ತಾಲೂಕಿನ ಖಂಡುಗದಹಳ್ಳಿ ಶ್ರೀ ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ಮೂಲಕ ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾದರು. ಜಾಂಡೇವು ಗಣಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ತಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ಕುರಿತು ದೇವಾಲಯದ ಧರ್ಮದರ್ಶಿ ಕೆ.ಬಿ. ಸೋಮೇಶ್ ಮಾತನಾಡಿ, ಶ್ರೀ ಸ್ವಾಮಿಯವರ ದೇವಸ್ಥಾನದ ಅಂಗಳದಲ್ಲಿ ಧ್ವ ಜಾರೋಹಣ ಮಾಡಿ, ಗಂಗಾ ಪೂಜೆಯೊಂದಿಗೆ ಮಹಾರುದ್ರಾಭಿಷೇಕ, ಕವಣೆ ಪೂಜೆಯೊಂದಿಗೆ ಶ್ರೀ ಸ್ವಾಮಿಯವರ ಸನ್ನಿಧಿಯಲ್ಲಿ ದೀಪೋತ್ಸವ ಹಾಗು ಮೇಲು ದೀಪೋತ್ಸವ ನಡೆಯಿತು.

ಅಲ್ಲದೆ ಶ್ರೀ ಚೌಡೇಶ್ವರಿ ದೇವಿಯವರಿಗೆ ಕುಂಕುಮಾರ್ಚನೆ, ಮಹಾಮಂಗಳಾರತಿ ಮತ್ತು ಕವಳೆ ಪೂಜೆ ನಂತರ ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಭಕ್ತರಿಗೆ ದಾಸೋಹ ಆಯೋಜಿಸಲಾಗಿತ್ತು. ಶಾಂತಿಯುತವಾಗಿ ನಡೆದ ಕಾರ್ಯಕ್ರಮಗಳ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ದೇವಸ್ಥಾನ ಮಂಡಳಿಯಿಂದ ಕೃತಜ್ಞತೆ ತಿಳಿಸಲಾಯಿತು.

-------------------

ಪವಾಡ ಪುರುಷ ಮರುಳಸಿದ್ದೇಶ್ವರ ಕಾರ್ತಿಕೋತ್ಸವ

ಕಡೂರು: ತಾಲೂಕಿನ ಜಿ. ಮಾದಾಪುರದಲ್ಲಿ ನೆಲೆಸಿರುವ ಪವಾಡ ಪುರುಷ ಮರುಳಸಿದ್ದೇಶ್ವರ ಸ್ವಾಮಿಗೆ ಕಾರ್ತಿಕೋತ್ಸವ, ಕದಲಿ ಪೂಜೆ, ಗುಗ್ಗಳೋತ್ಸವ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದವು.

ಸುತ್ತಮುತ್ತಲಿನ ನೂರಾರು ಗ್ರಾಮದ ಗ್ರಾಮಸ್ಥರು ತಮ್ಮ ಮನೆಯಲ್ಲಿ ಯಾವುದೇ ಶುಭ ಕೆಲಸಗಳನ್ನು ಮಾಡಬೇಕಾದರೆ ಮರುಳಸಿದ್ದೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಅಪ್ಪಣೆ ಪಡೆದು ಮುಂದುವರೆಯುವ ವಾಡಿಕೆ ಇಂದಿಗೂ ನಡೆದುಕೊಂಡು ಬಂದಿದೆ.

ನಿತ್ಯ ರುದ್ರಾಭಿಷೇಕ, ಅಮವಾಸ್ಯೆಯಂದು ವಿಶೇಷ ಪೂಜೆ, ಕಾರ್ತಿಕ ಮಾಸದಲ್ಲಿ ದೀಪಾಲಂಕಾರ, ಗುಗ್ಗುಳೋತ್ಸವ ನಡೆಯುತ್ತಿದ್ದು, ಯುವತಿಯರು ಗುಗ್ಗಳ ಸೇವೆ ನೆರವೇರಿಸಿದರೆ ಕಂಕಣ ಬಲ ಕೂಡಿಬರುತ್ತದೆ ಎಂಬ ನಂಬಿಕೆ ಬಲವಾಗಿ ಬೇರೂರಿದೆ. ನಿತ್ಯ ಅನ್ನ ದಾಸೋಹ ನಡೆದುಕೊಂಡು ಬರುತ್ತಿದೆ.ಕದಲಿ ಪೂಜೆ ನಂತರ ಭಕ್ತರು ಗುಗ್ಗಳದ ಕುಂಡಗಳನ್ನು ತಲೆಯ ಮೇಲೆ ಹೊತ್ತುಕೊಂಡು ಹರಕೆಯನ್ನು ತೀರಿಸಿದರು. ಬಂದಿದ್ದ ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು.