ಕನ್ನಡಪ್ರಭ ವಾರ್ತೆ ಸುತ್ತೂರು
ಕೃಷಿ ಇಲಾಖೆ, ಆತ್ಮ ಯೋಜನೆ, ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಮೈಸೂರಿನ ಎಟಿಎಂಎ ಸಹಯೋಗದೊಂದಿಗೆ ಎಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಗ್ರಾಮದಲ್ಲಿ ಖೇತ್ ಬಚ್ಚಾವೋ ಅಭಿಯಾನವನ್ನು ಆಯೋಜಿಸಲಾಗಿತ್ತು.ಕೆವಿಕೆ ವಿಜ್ಞಾನಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಮಣ್ಣು ಪರೀಕ್ಷೆ, ಮಣ್ಣಿನ ಆರೋಗ್ಯ ನಿರ್ವಹಣೆ,
ಹಸಿರು ಗೊಬ್ಬರ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಮಹತ್ವದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿದರು. ಮಣ್ಣಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ವೈಜ್ಞಾನಿಕ ಪೋಷಕಾಂಶ ನಿರ್ವಹಣೆಯ ಅಗತ್ಯವನ್ನು ತಿಳಿಸಲಾಯಿತು.ಮಣ್ಣಿನ ಫಲವತ್ತತೆಯನ್ನು ಸುಧಾರಿಸುವಲ್ಲಿ ಮತ್ತು ಬೆಳೆ ಉತ್ಪಾದಕತೆಯನ್ನು ಉಳಿಸಿಕೊಳ್ಳುವಲ್ಲಿ ಹಸಿರು ಗೊಬ್ಬರ ಬೆಳೆಗಳು ಮತ್ತು ಸಾವಯವ ಕೃಷಿ ಮಹತ್ವವನ್ನು ರೈತರಿಗೆ ತಿಳಿಸಿಕೊಡಲಾಯಿತು.
ಸುತ್ತೂರಿನ ಐಸಿಎಆರ್- ಜೆಎಸ್‌ಎಸ್ ಕೆವಿಕೆ ಹಿರಿಯ ವಿಜ್ಞಾನಿ ಮತ್ತು
ಮುಖ್ಯಸ್ಥರಾದ ಬಿ.ಎನ್. ಜ್ಞಾನೇಶ್ ಮಾತನಾಡಿ, ಸುಸ್ಥಿರ
ಮಣ್ಣಿನ ಆರೋಗ್ಯ ನಿರ್ವಹಣಾ ಪದ್ಧತಿಗಳು ಮತ್ತು ನೈಸರ್ಗಿಕ ಕೃಷಿ ವಿಧಾನಗಳಾದ ಜೀವಾಮೃತ, ಗೋಕೃಪಾಮೃತ, ಬೀಜಾಮೃತಗಳನ್ನು ಅಳವಡಿಕೆಯ ಕುರಿತು ರೈತರಿಗೆ ಮಾಹಿತಿ ನೀಡಿದರು.ಎಚ್.ಡಿ. ಕೋಟೆಯ ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್ ಮಾತನಾಡಿ,
ದೀರ್ಘಕಾಲೀನ ಕೃಷಿ ಸುಸ್ಥಿರತೆಗಾಗಿ ಮಣ್ಣಿನ ಸಂಪನ್ಮೂಲಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದರು.ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞರಾದ ಶಾಮರಾಜ್, ಡಾ.ಜಿ.ಎಂ. ವಿನಯ್, ಡಾ. ರಕ್ಷಿತ್ ರಾಜ್, ಆತ್ಮದ ಉಪಯೋಜನೆಯ ನಿರ್ದೇಶಕ ಸತೀಶ್, ಕೃಷಿ ಅಧಿಕಾರಿ ಸಿದ್ದಪ್ಪ ಸ್ವಾಮಿ ಅವರು ರೈತರಿಗೆ ಮಣ್ಣಿನ ಆರೋಗ್ಯ
ಕಾಪಾಡುವುದರ ಕುರಿತು ಮಾಹಿತಿ ನೀಡಿದರು.ಹಂಪಾಪುರ ಗ್ರಾಮದ ಮೆಕ್ಕೆಜೋಳ ಬೆಳೆಗಳಲ್ಲಿ ಕಂಡು ಬಂದ ಕೇದಿಗೆ ರೋಗ
ರೋಗ ಪೀಡಿತ ಹೊಲಗಳಿಗೆ ಕ್ಷೇತ್ರ ಭೇಟಿ ನಡೆಸಿ, ರೋಗದ ಲಕ್ಷಣಗಳು, ಹರಡುವಿಕೆ ಹಾಗೂ ಸಮಗ್ರ ನಿರ್ವಹಣಾ ಕ್ರಮಗಳ ಕುರಿತು ರೈತರಿಗೆ ಸ್ಥಳದಲ್ಲಿಯೇ ಮಾಹಿತಿ ನೀಡಲಾಯಿತು.ಕೃಷಿ ಇಲಾಖೆಯ ಅಧಿಕಾರಿಗಳು, ಆತ್ಮ ಸಿಬ್ಬಂದಿ, ರೈತರು ಹಾಗೂ ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜ್ಞಾನಿಗಳೊಂದಿಗೆ ಸಂವಾದ
ನಡೆಸಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಸಲಹೆಗಳನ್ನು ಪಡೆದರು. ಕಾರ್ಯಕ್ರಮದ ಕೊನೆಯಲ್ಲಿ ರೈತರಿಗೆ ಮಣ್ಣಿನ ಆರೋಗ್ಯ ಸಂರಕ್ಷಣೆ, ನೈಸರ್ಗಿಕ ಕೃಷಿ ಪದ್ಧತಿಗಳ ಅಳವಡಿಕೆ ಹಾಗೂ ಬೆಳೆರೋಗಗಳ ಸಮಗ್ರ ನಿರ್ವಹಣೆಗೆ ಕರೆ ನೀಡಿದರು.ಕೃಷಿ ಇಲಾಖೆ ಅಧಿಕಾರಿಗಳು, ಎಟಿಎಂಎ ಸಿಬ್ಬಂದಿ ಮತ್ತು ರೈತರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಬೆಳೆ ಮತ್ತು ಮಣ್ಣಿನ ನಿರ್ವಹಣೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಟಪಡಿಸಲು ತಜ್ಞರೊಂದಿಗೆ ಸಂವಹನ ನಡೆಸಿದರು. ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.