ಖೋಖೋ ಪಂದ್ಯಾಟ: ಆಳ್ವಾಸ್‌ಗೆ ಕಾಲೇಜಿಗೆ ಸತತ 18ನೇ ಬಾರಿ ಅವಳಿ ಪ್ರಶಸ್ತಿ

| Published : Sep 16 2025, 12:04 AM IST

ಖೋಖೋ ಪಂದ್ಯಾಟ: ಆಳ್ವಾಸ್‌ಗೆ ಕಾಲೇಜಿಗೆ ಸತತ 18ನೇ ಬಾರಿ ಅವಳಿ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡ ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಆಲಂಕರಿಸಿತು.

ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಸ್‌ಡಿಪಿಟಿ ಪಿಯು ಕಾಲೇಜು ಕಟೀಲು ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡ ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಆಲಂಕರಿಸಿತು.

ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು 5 ಅಂಕಗಳು ಹಾಗೂ ಇನ್ನಿಂಗ್ಸ್‌ನೊಂದಿಗೆ ಮಣಿಸಿ 18ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಆಳ್ವಾಸ್‌ನ ಅಮರೇಶ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಅಶ್ವಿನ್ ಪಡೆದರು.

ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್ಡಿಪಿಟಿ ಪಿಯು ಕಾಲೇಜು ಕಟೀಲು ತಂಡವನ್ನು 8 ಅಂಕಗಳು ಹಾಗೂ ಇನ್ನಿಂಗ್ಸ್‌ನೊಂದಿಗೆ ಮಣಿಸಿ 16ನೇ ಬಾರಿ ಜಯಶಾಲಿಯಾಯಿತು.

ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಸಿಂಧುಜಾ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಮೋನಿಕಾ ಪಡೆದರು.

ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.