ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ಕೊಲೆ

| Published : Sep 11 2024, 01:06 AM IST

ಸಾರಾಂಶ

ಹೊಸಕೋಟೆ: ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ನಗರಸಭೆಯ ವಾಣಿಜ್ಯ ಮಳಿಗೆಗೆಳ ಮುಂದೆ ಸೋಮವಾರ ರಾತ್ರಿ ಮಲಗಿದ್ದ ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಹೊಸಕೋಟೆ: ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ನಗರಸಭೆಯ ವಾಣಿಜ್ಯ ಮಳಿಗೆಗೆಳ ಮುಂದೆ ಸೋಮವಾರ ರಾತ್ರಿ ಮಲಗಿದ್ದ ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಸ್ಥಳೀಯರು ಮೃತ ದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೊಸಕೋಟೆ ಡಿವೈಎಸ್ಪಿ ಅಣ್ಣಾ ಸಾಹೇಬ್ ಪಾಟೀಲ್, ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಸೇರಿದಂತೆ ಸಿಬ್ಬಂದಿ ವರ್ಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅಂಗಡಿ ಮುಂದಿದ್ದ ಸಿಮೆಂಟ್ ಇಟ್ಟಿಗೆಯನ್ನು ತಲೆ ಮೇಲೆ ಹಾಕಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ಮೃತದೇಹವನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಮೃತದೇಹದ ವಾರಸುದಾರರಿದ್ದಲ್ಲಿ ಹೊಸಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳ ವೀಕ್ಷಣೆ ಜೊತೆಗೆ ಮತ್ತಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ.