ಸಾರಾಂಶ
ತಿರುವುಗಳಲ್ಲಿ ಸೂಕ್ತ ನಾಮಫಲಕಗಳಿಲ್ಲದೆ ಹೊಸದಾಗಿ ಬರುವ ವಾಹನ ಚಾಲಕರಿಗೆ ತೀವ್ರ ತೊಂದರೆಯಾಗಿತ್ತು. ಅನೇಕ ಅಪಘಾತಗಳು ಸಂಭವಿಸಿತ್ತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿ- ಕಿನ್ನಿಗೋಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ತಿರುವುಗಳಿಗೆ ಮಾರ್ಗಸೂಚಿ ಫಲಕ ಹಾಗೂ ಬಣ್ಣ ಕಳೆದುಕೊಂಡ ಹೆದ್ದಾರಿಗೆ ರಿಫ್ಲೆಕ್ಟರ್‌ಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಳವಡಿಸಿದ್ದಾರೆ.ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ, ಹೊಸ ಕಾವೇರಿ, ಮೂರುಕಾವೇರಿ ಸಹಿತ ಅನೇಕ ಅಪಾಯಕಾರಿ ತಿರುವುಗಳಲ್ಲಿ ಸೂಕ್ತ ನಾಮಫಲಕಗಳಿಲ್ಲದೆ ಹೊಸದಾಗಿ ಬರುವ ವಾಹನ ಚಾಲಕರಿಗೆ ತೀವ್ರ ತೊಂದರೆಯಾಗಿತ್ತು. ಅನೇಕ ಅಪಘಾತಗಳು ಸಂಭವಿಸಿತ್ತು.ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ರಾಜ್ಯ ಹೆದ್ದಾರಿ ತಿರುವುಗಳಲ್ಲಿ ಎಚ್ಚರಿಕೆಯ ಫಲಕಗಳನ್ನು ಅಳವಡಿಸಲಾಗಿದೆ. ಹಾಗೆಯೇ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಚರ್ಚ್ ಬಳಿ ಹೆದ್ದಾರಿಗೆ ರಿಫ್ಲೆಕ್ಟರ್ ಅಳವಡಿಸಲಾಗಿದೆ.
ಲೋಕೋಪಯೋಗಿ ಇಲಾಖೆಯ ಕಾರ್ಯಕ್ಕೆ ಸಾಮಾಜಿಕ ಕಾರ್ಯಕರ್ತ ಸ್ಪ್ಯಾನಿ ಪಿಂಟೋ ಶ್ಲಾಘಿಸಿದ್ದು, ಈ ಭಾಗದಲ್ಲಿ ಹೆದ್ದಾರಿ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಇಲಾಖೆಯನ್ನು ಒತ್ತಾಯಿಸಿದ್ದಾರೆ.