ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂ.1ರಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡುವ ಕುರಿತು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ

ಮೂಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂ.1ರಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡುವ ಕುರಿತು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿದ್ದು, ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಬಗ್ಗೆ ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ದೇವಾಲಯದ ಸಾಂ. ತೆರೆಜಾ ವಾರ್ಡ್ ನ ಸದಸ್ಯರು ಕಿನ್ನಿಗೋಳಿ ತುಡಮ್ ಪರಿಸರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇದ ಬಗ್ಗೆ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ ಮಾಡುವ ಮೂಲಕ ರಸ್ತೆ ಇಕ್ಕೆಲಗಳಲ್ಲಿ ಎರಡು ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಕಸವನ್ನು ತೆರವುಗೊಳಿಸಿದರು.

ಸಾರ್ವಜನಿಕರೆಲ್ಲರೂ ತಮ್ಮ ಜವಾಬ್ದಾರಿ ಅರಿತು ಪ್ಲಾಸ್ಟಿಕ್ ಬಳಕೆ ಕಡಿಮೆ ಗೊಳಿಸುವಂತೆ ಹಾಗೂ ಪರಿಸರ ಸ್ವಚ್ಛತೆ ಅಗತ್ಯತೆ ಬಗ್ಗೆ ಜಾಗೃತಿ ಮೂಡಿಸಿದರು. ನೈಸರ್ಗಿಕ ಹಾಗೂ ಬಟ್ಟೆ ಚೀಲ ಬಳಕೆ ಮೂಲಕ ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇದ ಬಗ್ಗೆ ಜಾಗೃತಿ ಮೂಡಿಸಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಈ ಸಂದರ್ಭ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಸದಸ್ಯ ಪ್ರಣೀಕ್, ಸಾಮಾಜಿಕ ಕಾರ್‍ಯಕರ್ತ ಸ್ಟ್ಯಾನಿ ಪಿಂಟೋ, ತೆರೆಜಾ ವಾರ್ಡ್ ಗುರಿಕಾರರು, ಗ್ರೆಟ್ಟಾ ಫರ್ನಾಂಡಿಸ್ ಪ್ರತಿನಿಧಿ ಸದಸ್ಯರು ಉಪಸ್ತಿತರಿದ್ದರು.