ಸಾರಾಂಶ
ಉಳೆಪಾಡಿ ಕ್ಷೇತ್ರದ ಧರ್ಮದರ್ಶಿ ಮೋಹನ್‌ದಾಸ್ ಸುರತ್ಕಲ್ ಧಾರ್ಮಿಕ ಉಪನ್ಯಾಸ ನೀಡಿದರು
ಮುಲ್ಕಿ: ಶ್ರೀ ರಾಘವೇಂದ್ರ ಸ್ವಾಮೀಜಿಗಳು ಧಾರ್ಮಿಕತೆ ಜತೆಗೆ ಸಮಾಜದ ಅಭಿವೃದ್ಧಿ ಹರಿಕಾರರಾಗಿದ್ದರು. ಅವರ ಆರಾಧನೆ ಒಂದು ಯಜ್ಞದಂತೆ. ಅದರ ಫಲ ಸಮಾಜಕ್ಕೆ ದೊರೆಯಬೇಕು ಎಂದು ಕಟೀಲು ದೇವಸ್ಥಾನದ ಅರ್ಚಕ ವೇ.ಮೂ. ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಕಿನ್ನಿಗೋಳಿ ಯುಗಪುರಷ ವಲಯದ ಶ್ರೀ ರಾಘವೇಂದ್ರ ಸ್ವಾಮಿ ಮಂದಿರದಲ್ಲಿ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಉಳೆಪಾಡಿ ಕ್ಷೇತ್ರದ ಧರ್ಮದರ್ಶಿ ಮೋಹನ್‌ದಾಸ್ ಸುರತ್ಕಲ್ ಧಾರ್ಮಿಕ ಉಪನ್ಯಾಸ ನೀಡಿದರು. ವಿಜಯ ಕಲಾವಿದರು ಸಂಸ್ಥೆಯ ಸಂಚಾಲಕ ಸಾಯಿನಾಥ ಶೆಟ್ಟಿ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಪು. ಗುರುಪ್ರಸಾದ್ ಭಟ್, ಅರ್ಚಕ ರಾಘವೇಂದ್ರ ಭಟ್, ತಾಳಿಪಾಡಿಗುತ್ತು ದಾಮೋದರ ಶೆಟ್ಟಿ, ಯುಗಪುರುಷದ ಭುವನಾಭಿರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದ ಅಂಗವಾಗಿ ಪಲಕಿ ಉತ್ಸವ, ರಥೋತ್ಸವ ನಡೆಯಿತು.