ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಶಿಸ್ತು, ಸಮಯಪ್ರಜ್ಞೆ, ತಂಡದ ಮನೋಭಾವ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕಿನ್ನಿಗೋಳಿ ಕೆನರಾ ಬ್ಯಾಂಕ್‌ನ ಮ್ಯಾನೇಜರ್ ಸುರೇಶ್ ಅಮೀನ್ ಹೇಳಿದರು.

ಮೂಲ್ಕಿ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಶಿಸ್ತು, ಸಮಯಪ್ರಜ್ಞೆ, ತಂಡದ ಮನೋಭಾವ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕಿನ್ನಿಗೋಳಿ ಕೆನರಾ ಬ್ಯಾಂಕ್‌ನ ಮ್ಯಾನೇಜರ್ ಸುರೇಶ್ ಅಮೀನ್ ಹೇಳಿದರು.

ಮುಂಡ್ಕೂರು ವಿಪಿ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿದ ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣಗೈದು ಮಾತನಾಡಿದರು. ಕಾರ್ಯಕ್ರಮದ ಪಥಸಂಚಲನಕ್ಕೆ ಕರ್ಣಾಟಕ ಬ್ಯಾಂಕ್‌ನ ಮ್ಯಾನೇಜರ್ ಶಶಿಕಿರಣ್ ಕೆ. ಚಾಲನೆ ನೀಡಿದರು. ಕ್ರೀಡಾಕೂಟವನ್ನು ಪೂರ್ಣಿಮಾ ಸಾಯಿನಾಥ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿನ್ನಿಗೋಳಿ ರೋಟರಿ ಅಧ್ಯಕ್ಷ ಪ್ರವೀಣ್ ಸಾಲ್ಯಾನ್ ವಹಿಸಿದ್ದು, ಈ ಸಂದರ್ಭ ವಿದ್ಯಾವರ್ಧಕ ಪಿಯು ಕಾಲೇಜಿನ ಅಧ್ಯಕ್ಷ ಸುಧಾಕರ್ ಶೆಟ್ಟಿ, ಲಯನ್ಸ್ ಕ್ಲಬ್ ಮುಂಡ್ಕೂರಿನ ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ, ವಿದ್ಯಾವರ್ಧಕ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಡಾ. ಪ್ರಭಾಕರ ಶೆಟ್ಟಿಗಾರ್, ಮುಂಡ್ಕೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅರುಣ್ ರಾವ್, ಪ್ರಕಾಶ್ ಸಪಳಿಗ, ವಿದ್ಯಾವರ್ಧಕ ವಿದ್ಯಾಸಂಸ್ಥೆಯ ರಾಜ್ಯಶಾಸ್ತ್ರ ಪ್ರಾಚಾರ್ಯ ಶಾಂತರಾಮ್ ವಾಗ್ಲಾ , ವಿದ್ಯಾವರ್ಧಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸವಿತಾ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಸುನಿತಾ ಗುರುರಾಜ್ ಸ್ವಾಗತಿಸಿದರು. ಶಿಕ್ಷಕಿ ಸರಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ನಯನಾ ವಂದಿಸಿದರು.