ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಡೆತ್ತೂರು ಮುಕ್ಕದಲ್ಲಿ ನೀರಿನ ಸಮಸ್ಯೆ

| Published : Mar 30 2024, 12:59 AM IST

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಡೆತ್ತೂರು ಮುಕ್ಕದಲ್ಲಿ ನೀರಿನ ಸಮಸ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ದೂರಿನ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಎಂಜಿನಿಯರ್ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್‌ ಹೇಳಿದರು.

ಕನ್ನಡಪ್ರಭವಾರ್ತೆ ಮೂಲ್ಕಿ

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದ ಕೊಡೆತ್ತೂರು ಮುಕ್ಕ ರಸ್ತೆಯಲ್ಲಿನ ಸುಮಾರು ೩೦ ಮನೆಗಳಿಗೆ ಕಳೆದ ೨೨ ದಿನಗಳಿಂದ ನೀರಿನ ಸಮಸ್ಯೆಯಿಂದ ಜನರು ಕಂಗಲಾಗಿದ್ದಾರೆ.

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹೆಚ್ಚಿನ ಕಡೆಗಳಲ್ಲಿ ಟ್ಯಾಂಕ್‌ಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಸರಬರಾಜು ಆಗುತ್ತಿದ್ದು ಮೆನ್ನಬೆಟ್ಟುವಿನ ಕೊಡೆತ್ತೂರು ಮುಕ್ಕ ಪರಿಸರಕ್ಕೆ ಈ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಬರುತ್ತಿಲ್ಲ. ಕೂಡಲೇ ನೀರು ಸರಬರಾಜು ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ದೂರಿನ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಎಂಜಿನಿಯರ್ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್‌ ಹೇಳಿದರು. ಕಳೆದ ೨೩ ದಿನದಿಂದ ಸರಿಯಾಗಿ ನೀರು ಬರುತ್ತಿಲ್ಲ. ಕೊಡೆತ್ತೂರು ಮುಕ್ಕ ಪರಿಸರದಲ್ಲಿ ಇಂದಿಗೆ ಶುಕ್ರವಾರಕ್ಕೆ ೨೩ ದಿನ ಆಗಿದ್ದು ನಳ್ಳಿಯಲ್ಲಿ ಕುಡಿಯುವ ನೀರು ಬರುತ್ತಿಲ್ಲ. ಈ ಬಗ್ಗೆ ಪಟ್ಟಣ ಪಂಚಾಯಿತಿ ಭೇಟಿ ನೀಡಿ ಅಧಿಕಾರಿಗಳಲ್ಲಿ ಸಮಸ್ಯೆ ಬಗ್ಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಕ್ಕ ನಿವಾಸಿ ಜಯರಾಮ ರಾವ್‌ ಒತ್ತಾಯಿಸಿದ್ದಾರೆ.

ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕಾಡು ಪರಿಸರದಲ್ಲಿ ಹಲವಾರು ಮನೆಗಳಿಗೆ ಗುರುವಾರ ಸಂಜೆ ಕೆಸರು ಮಿಶ್ರಿತ ನೀರು ಬರುತ್ತಿದ್ದು ಕುಡಿಯುವ ಹಾಗೂ ಇತರ ಕೆಲಸಗಳಿಗೆ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು

ರವೀಂದ್ರ ಕುಮಾರ್ ಕೆರೆಕಾಡು ಸಮಸ್ಯೆ ತೋಡಿಕೊಂಡರು.