ಸಾರಾಂಶ
ಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ಗುರುವಾರ ಜರುಗಿದ ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸಂಮಾನ, ಕೃತಿ ಬಿಡುಗಡೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಗುರುವಾರ ನೆರವೇರಿತು.
ಮೂಲ್ಕಿ: ಯುವ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಹಾಗೂ ಯುಗಪುರುಷ ಸಂಸ್ಥೆ ಆರಂಭಿಸುವ ಮೂಲಕ ಕಿನ್ನಿಗೋಳಿ ಸಾಹಿತ್ಯಿಕವಾಗಿ ಬೆಳೆಯುವಲ್ಲಿ ಕೋ ಅ ಉಡುಪರ ಪಾತ್ರ ಗಣನೀಯ ಎಂದು ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದ್ದಾರೆ.ಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ಗುರುವಾರ ಜರುಗಿದ ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸಂಮಾನ, ಕೃತಿ ಬಿಡುಗಡೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಂಶೊಧಕ ಡಾ. ಪುಂಡಿಕಾ ಗಣಪಯ್ಯ ಭಟ್ ಸಂಸ್ಮರಣಾ ಭಾಷಣ ಮಾಡಿದರು. ಕೊ. ಅ. ಉಡುಪ ಪ್ರಶಸ್ತಿಯನ್ನು ಡಾ.ಬಿ. ಪ್ರಭಾಕರ ಶಿಶಿಲ ಅವರಿಗೆ ನೀಡಿ ಸನ್ಮಾನಿಸಲಾಯಿತು.
ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಅವರನ್ನು ಕಮಲಾಕ್ಷಿ ಉಡುಪ ಸ್ಮರಣಾರ್ಥ ವೇದ ವಿದ್ವಾಂಸರ ನೆಲೆಯಲ್ಲಿ ಗೌರವಿಸಲಾಯಿತು. ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ರೇಖಾ ಸುದೇಶ್ ರಚಿತ ‘ಅಧಮ್ಯ’ ಕೃತಿಯನ್ನು ಕರ್ಣಾಟಕ ಬ್ಯಾಂಕಿನ ನಿವೃತ್ತ ಅಧಿಕಾರಿ ಶ್ರೀನಿವಾಸ ದೇಶಪಾಂಡೆ ಬಿಡುಗಡೆಗೊಳಿಸಿದರು. ಉದ್ಯಮಿ ಪೃಥ್ವಿರಾಜ್ ಆಚಾರ್ಯ ವಿದ್ಯಾರ್ಥಿವೇತನ ವಿತರಿಸಿದರು.ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉದ್ಯಮಿ ಶ್ರೀಪತಿ ಭಟ್ ಮೂಡುಬಿದಿರೆ, ಲೇಖಕ ಪಿ.ವಿ.ಪ್ರದೀಪ ಕುಮಾರ್, ಡಾ.ನಯನಾಭಿರಾಮ ಉಡುಪ , ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಪದ್ಮಶ್ರೀ ಭಟ್, ಲೇಖಕಿ ರೇಖಾ ಸುದೇಶ್, ಪು.ಗುರುಪ್ರಸಾದ್ ಭಟ್ ಕಿನ್ನಿಗೋಳಿ ಮತ್ತಿತರರಿದ್ದರು.ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಸ್ವಾಗತಿಸಿದರು. ಶರತ್ ಶೆಟ್ಟಿ ಕಿನ್ನಿಗೋಳಿ ನಿರೂಪಿಸಿದರು. ಅನುಷಾ ಕರ್ಕೇರ ವಂದಿಸಿದರು.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದ.ಕ.ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕೆರೆಕಾಡು ಶ್ರೀ ವಿನಾಯಕ ಮೇಳ ವತಿಯಿಂದ ಮಾರುತಿ ಪ್ರತಾಪ ಯಕ್ಷಗಾನ ಬಯಲಾಟ ನಡೆಯಿತು.