ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಕಿಸಾನ್ ಸಂಘ ಆಗ್ರಹ

| Published : Feb 06 2024, 01:33 AM IST

ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಕಿಸಾನ್ ಸಂಘ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ವಿವಿಧ ಯೋಜನೆಗಳಿಂದ ರೈತರ ಖಾತೆಗೆ ಜಮಾ ಆಗುತ್ತಿರುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರಿಗೆ ನೀಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘವು ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಲಕ್ಷ್ಮೇಶ್ವರ: ಸರ್ಕಾರದ ವಿವಿಧ ಯೋಜನೆಗಳಿಂದ ರೈತರ ಖಾತೆಗೆ ಜಮಾ ಆಗುತ್ತಿರುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರಿಗೆ ನೀಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘವು ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಈ ವೇಳೆ ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಟಾಕಪ್ಪ ಸಾತಪೂತೆ ಮಾತನಾಡಿ, ಈ ವರ್ಷ ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದ್ದು, ರೈತರು ಬೆಳೆ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತರು ಬೆಳೆ ಸಾಲ ತುಂಬಲು ಆಗದೆ ತೊಂದರೆಗೆ ಸಿಲುಕಿದ್ದಾರೆ. ಈ ವೇಳೆ ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ಮೂಲಕ ರೈತರ ಖಾತೆಗೆ ಜಮಾ ಆಗುತ್ತಿರುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರಿಗೆ ನೀಡದೆ ಸತಾಯಿಸುತ್ತಿದ್ದಾರೆ ಹಾಗೂ ಬೆಳೆ ಸಾಲಕ್ಕೆ ಹೊಂದಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಆದ್ದರಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿರುವ ವೇಳೆ ಬ್ಯಾಂಕ್ ಅಧಿಕಾರಿಗಳು ರೈತರ ಹಣವನ್ನು ನೀಡಿ ಅವರ ದೈನಂದಿನ ಬದುಕಿಗೆ ದಾರಿ ಮಾಡುಕೊಡುವುದು ಅಗತ್ಯವಾಗಿದೆ. ಆದ್ದರಿಂದ ತಾವುಗಳು ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ರೈತರ ಹಿತಕಾಯುವ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು. ಈ ವೇಳೆ ಆದೇಶ ಹುಲಗೂರ, ಅಬ್ದುಲ್ ಮುನಾಫ್ ಹನಮಂತಪ್ಪ ಬೆಟಗೇರಿ, ರಮೇಶ ಅಂದಲಗಿ, ಕರಿಯಪ್ಪ ಹುರಕನವರ. ಅಶೋಕ ಹುಲಗೂರ, ಚನ್ನಪ್ಪ ಅಬನೂರ ಫಕ್ಕೀರೇಶ ಹಂಚಿನಮನಿ ಇದ್ದರು. ಪೊಟೋ-ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಭಾರತೀಯ ಕಿಸಾನ್ ಸಂಘದ ಸದಸ್ಯರು ರೈತರ ಖಾತೆಗೆ ನೇರ ಹಣ ಜಮಾ ಮಾಡಲು ಆಗ್ರಹಿಸುತ್ತಿರುವುದು.