ಉಡುಪಿ: ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷ ಕಿಶೋರ್ ಆಳ್ವ ಅವರಿಗೆ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಾಂಧಿ ಸ್ಮೃತಿ ಸಂಸ್ಥೆ ವತಿಯಿಂದ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣ ದಲ್ಲಿ ಆಯೋಜಿಸಲಾದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸನಾತನ ಫೌಂಡೇಶನ್‌ನ ಅಧ್ಯಕ್ಷರು, ಅಸೋಚೆಮ್ ಕರ್ನಾಟಕ ಅಧ್ಯಕ್ಷರು, ಬಿಸಿಐಸಿಯ ಮಾಜಿ ಅಧ್ಯಕ್ಷರಾಗಿರುವ ಕಿಶೋರ್ ಆಳ್ವಾ ಅವರು, ಕರ್ನಾಟಕದಲ್ಲಿ ಕೈಗಾರಿಕಾ ವೃದ್ಧಿಗೆ ಉತ್ತೇಜನ ನೀಡುವುದು, ವಾಣಿಜ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ಬಲ ತುಂಬುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಹಿತಾಸಕ್ತಿ ವಲಯಗಳ ಸಮನ್ವಯದ ಮೂಲಕ ರಾಜ್ಯದ ಸಾಮಾಜಿಕ-ಆರ್ಥಿಕ ಪ್ರಗತಿಗೆ ನೀಡಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಶ್ರೀ ಕಿಶೋರ್ ಆಳ್ವ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ವಿಪ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಪತ್ ರಾಜ್ ಅವರು ಉಪಸ್ಥಿತರಿದ್ದರು.