ಸಾರಾಂಶ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡಬೇಕು. ಉಡುಪಿ ಜಿಲ್ಲೆ ಈ ಎಲ್ಲ ಅಭಿಯಾನಗಳಲ್ಲಿ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆಯುವಂತೆ ಸಂಘಟಿತ ಶ್ರಮ ವಹಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು.ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಕ್ರಮಗಳ ಕುರಿತು ಹಾಗೂ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಮನ್ ಕೀ ಬಾತ್ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಮಾಡುವ ಕುರಿತು ಮಾಹಿತಿ ನೀಡಿದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೆರಣoಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಕ್ಯಾತ್ ಶೆಟ್ಟಿ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ರಾಜ್ಯ ಪ್ರಕೋಷ್ಠಗಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.