ಕಿಶೋರ್‌ ಕುಮಾರ್‌ ಗೆಲವು ಕಾರ್ಯಕರ್ತರ ಗೆಲವು: ಗೀತಾಂಜಲಿ ಸುವರ್ಣ

| Published : Oct 21 2024, 12:49 AM IST

ಸಾರಾಂಶ

ಸೋಮವಾರ ನಡೆಯುವ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪ್ರಚಂಡ ಗೆಲುವಿನ‌ ಮೂಲಕ ಸಾಮಾನ್ಯ‌ ಕಾರ್ಯಕರ್ತನ ಗೆಲುವೆಂದು ಸಂಭ್ರಮಿಸೋಣ ಎಂದು ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ ಅವರು ಅವಿಭಜಿತ ದ.ಕ. ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಮತದಾರರಲ್ಲಿ‌ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ದೇಶಸೇವೆ ಮತ್ತು ಸಮಾಜ ಸೇವೆಗೆ ಮುಡಿಪಾಗಿಟ್ಟ ಕುಟುಂಬದ ಹಿನ್ನೆಲೆಯುಳ್ಳ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅವಕಾಶ ಕಲ್ಪಿಸುವ ಮೂಲಕ ಪಕ್ಷ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಬಿಜೆಪಿ ಎಂದಿಗೂ ಕಾರ್ಯಕರ್ತರ ಪಕ್ಷ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ.

ಬಿಜೆಪಿಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ನೀಡುವ ಕಾಲ ಕೂಡಿ ಬಂದಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಜಿಲ್ಲೆಗಳ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಯಾವುದೇ ಅನುದಾನ ಬಿಡುಗಡೆ ಮಾಡದೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿದೆ. ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ ಬಡ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.