ಸಾರಾಂಶ
ಯಾವುದೇ ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದರಿಂದ ಸ್ನೇಹ ಪ್ರೀತಿ ಬೆಳೆಯುತ್ತದೆ,
ಮಲ್ಕುಂಡಿ : ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾನಸಿಕವಾಗಿ ಸಧೃಡರಾಗಬಹುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.ಸಮೀಪದ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದರಿಂದ ಸ್ನೇಹ ಪ್ರೀತಿ ಬೆಳೆಯುತ್ತದೆ, ಪಠ್ಯದ ಜೊತೆಗೆ ಕ್ರೀಡೆ ಬಹಳ ಮುಖ್ಯವಾಗಿದೆ, ಮನುಷ್ಯನು ಆರೋಗ್ಯವಾಗಿರಬೇಕಾದರೆ, ವ್ಯಾಯಮ ಮುಖ್ಯ ಅದೇ ರೀತಿ ಕ್ರೀಡೆಯು ಕೂಡ ಒಂದು ವ್ಯಾಯಮವಾಗಿರುತ್ತದೆ. ಯಾವುದೇ ತಂಡಗಳು ಸೋತರು ಅದನ್ನೇ ಗೆಲುವು ಎಂದು ಸ್ವೀಕರಿಸಿದ್ದಾಗ ಮಾತ್ರ ಆಟದಲ್ಲಿ ಮುಂದೆ ಬರಲು ಸಾಧ್ಯ ಎಂದರು.ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಪಂ ಮಾಜಿ ಸದಸ್ಯ ಕೆ. ಮಾರುತಿ, ಗ್ರಾಪಂ ಅಧ್ಯಕ್ಷೆ ತಾಯಮ್ಮ, ಹಾಡ್ಯ ಗ್ರಾಪಂ ಅಧ್ಯಕ್ಷ ಹರೀಶ್ ಕುಮಾರ್, ಉಪಾಧ್ಯಕ್ಷ ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪ್ರಾಂಶುಪಾಲ ಮಂಜುನಾಥ್ ಇದ್ದರು.