ಸಾರಾಂಶ
ಹಾವೇರಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನ.7ರಂದು ನಗರದಲ್ಲಿ ಅದ್ಧೂರಿಯಾಗಿ ವೀರರಾಣಿ ಕಿತ್ತೂರ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಗಡಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.7ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಕುಂಭಮೇಳ, ವೀರಗಾಸೆ ಸೇರಿದಂತೆ ವಿವಿಧ ವಾದ್ಯ ತಂಡಗಳೊಂದಿಗೆ ವೀರರಾಣಿ ಕಿತ್ತೂರು ಚನ್ನಮ್ಮನ ಭಾವಚಿತ್ರದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಎಂ.ಜಿ ರಸ್ತೆ, ಜೆ.ಪಿ. ಸರ್ಕಲ್ ಮೂಲಕ ಸಾಗಿ ಹೊಸಮನಿ ಸಿದ್ದಪ್ಪ ವೃತ್ತ, ಕಿತ್ತೂರು ಚನ್ನಮ್ಮ ವೃತ್ತದ ಮಾರ್ಗವಾಗಿ ಜಿಲ್ಲಾ ಗುರುಭವನದವರೆಗೆ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದ ಕಾಮಗಾರಿಯ ಅಡಿಗಲ್ಲು ಸಮಾರಂಭ ನೆರವೇರಲಿದೆ. ನಂತರ ಹಾನಗಲ್ಲ ರಸ್ತೆಯ ತುಳಸಿ ಐಕಾನ್‌ನಲ್ಲಿರುವ ಸಮಾಜದ ಸಮುದಾಯ ಭವನದ ಭೂಮಿಪೂಜೆ ಕಾರ್ಯಕ್ರಮ ನೆರವೇರಲಿದೆ ಎಂದರು.ಅಂದು ಮಧ್ಯಾಹ್ನ 12ಕ್ಕೆ ಜಿಲ್ಲಾ ಗುರುಭವನದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಮೆರವಣಿಗೆ, ಭೂಮಿ ಪೂಜೆ ಹಾಗೂ ವೇದಿಕೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೂಡಲಸಂಗಮದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಹಿಸಲಿದ್ದಾರೆ. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯು.ಬಿ ಬಣಕಾರ, ಯಾಸೀರಖಾನ ಪಠಾಣ, ಸಭಾಪತಿ ಬಸವರಾಜ ಹೊರಟ್ಟಿ, ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಸಲೀಂ ಅಹ್ಮದ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್‌ಎಫ್‌ಎನ್ ಗಾಜೀಗೌಡ್ರ ಸೇರಿದಂತೆ ಜಿಲ್ಲೆಯ ಮಾಜಿ ಶಾಸಕರು, ಸ್ಥಳೀಯ ಜನಪ್ರತಿಧಿನಿಗಳು ಹಾಗೂ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಆದ್ದರಿಂದ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು, ನಾಗರಿಕರು, ಚನ್ನಮ್ಮನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಡಾ.ಬಸವರಾಜ ವೀರಾಪೂರ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಶಂಕರ ಬಿಸಲಹಳ್ಳಿ, ಹೊಳೆಯಪ್ಪ ಸೂರದ, ಸದಾನಂದ ಹಾದಿಮನಿ, ದಾನೇಶಪ್ಪ ಕೆಂಗೊಂಡ, ಕೋಟ್ರೇಶ ಬಿಜಾಪೂರ, ಶಿವರಾಜ ಮತ್ತಿಹಳ್ಳಿ, ಲಲಿತಾ ಗುಂಡೇನಹಳ್ಳಿ ಸೇರಿದಂತೆ ಇತರರು ಇದ್ದರು.
;Resize=(128,128))
;Resize=(128,128))
;Resize=(128,128))