ಕಿತ್ತೂರು ರಾಣಿ ಚನ್ನಮ್ಮ ಉತ್ಸವ, ವೀರ ಜ್ಯೋತಿ ಯಾತ್ರೆ
KannadaprabhaNewsNetwork | Published : Oct 15 2023, 12:46 AM IST
ಕಿತ್ತೂರು ರಾಣಿ ಚನ್ನಮ್ಮ ಉತ್ಸವ, ವೀರ ಜ್ಯೋತಿ ಯಾತ್ರೆ
ಸಾರಾಂಶ
ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚನ್ನಮ್ಮ ಉತ್ಸವ-2023 ನಿಮಿತ್ತ ವೀರ ಜ್ಯೋತಿ ಯಾತ್ರೆ ವಾಹನವು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದೆ.
ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚನ್ನಮ್ಮ ಉತ್ಸವ-2023 ನಿಮಿತ್ತ ವೀರ ಜ್ಯೋತಿ ಯಾತ್ರೆ ವಾಹನವು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದೆ. ಬೆಂಗಳೂರು ನಗರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಭಾಗ ನೆಲಮಂಗಲದ ಅರಿಶಿನಕುಂಟೆ ಪ್ರವೇಶಿಸುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಅದ್ಧೂರಿಯಾಗಿ ಸ್ವಾಗತಿಸಿದರು. ವೀರ ಜ್ಯೋತಿ ಯಾತ್ರೆ ವಾಹನಕ್ಕೆ ಪೂಜೆ ಸಲ್ಲಿಸಿ ಯಾತ್ರೆ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಿ ತುಮಕೂರು ಜಿಲ್ಲೆಗೆ ತೆರಳಲು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರ ಶಾಸಕ ಎನ್.ಶ್ರೀನಿವಾಸ್, ನಗರಸಭಾ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.