ಸಾರಾಂಶ
ಪೂರ್ವಸಿದ್ಧತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹೇಳಿಕೆ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹೇಳಿದರು.ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು. ಅ.23 ರಂದು ಬೆಳಗ್ಗೆ 11 ಗಂಟೆಗೆ ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜಯಂತಿ ಅಂಗವಾಗಿ ಗೀತ ಗಾಯನ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.ಈ ಕುರಿತಂತೆ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಮಹಡಿ ಶಿವಮೂರ್ತಿ, ವೀರಶೈವ ಸಮಾಜ ಕಾರ್ಯದರ್ಶಿ ವೀರೇಂದ್ರ ಕುಮಾರ್, ವೀರಶೈವ ಸಮಾಜ ಸಹಕಾರ್ಯದರ್ಶಿ ಜಿತೇಂದ್ರ ಎನ್ ಹುಲಿಕುಂಟೆ, ಪಂಚಮಸಾಲಿ ಸಮಾಜದ ಮುಖಂಡರಾದ ತಿಪ್ಪೇಸ್ವಾಮಿ, ಶಿವಪ್ರಕಾಶ್, ಆರತಿ ಮಹಡಿ ಶಿವಮೂರ್ತಿ, ನರೇಂದ್ರ ಬಾಬು, ಮಂಜುನಾಥ ಸ್ವಾಮಿ, ಉಮಾ ರಮೇಶ್, ರೀನಾವೀರಭದ್ರಪ್ಪ, ಜಿ.ಎಂ.ಪ್ರಕಾಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.