ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

| Published : Oct 24 2024, 12:49 AM IST

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಬೆಳ್ಳಿ ರಥದಲ್ಲಿ ಇಡಲಾಗಿದ್ದ ಚೆನ್ನಮ್ಮರವರ ಭಾವಚಿತ್ರಕ್ಕೆ ಕ್ಷೇತ್ರದ ಶಾಸಕ ಸ್ವರೂಪ್ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಕಿತ್ತೂರು ರಾಣಿ ಚೆನ್ನಮ್ಮ ಮೊಟ್ಟಮೊದಲ ವೀರ ಮಹಿಳೆ, ಹೋರಾಟಗಾರ್ತಿ ಆಗಿದ್ದಾರೆ ಎಂದರು. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಧೀರ ಮಹಿಳೆಯಾಗಿ ಆಗಿನ ಕಾಲದಲ್ಲೇ ಬ್ರಿಟೀಷರ ಕ್ರೌರ್ಯಕ್ಕೆ ಎದೆಗುಂದದೆ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಬೆಳ್ಳಿ ರಥದಲ್ಲಿ ಇಡಲಾಗಿದ್ದ ಚೆನ್ನಮ್ಮರವರ ಭಾವಚಿತ್ರಕ್ಕೆ ಕ್ಷೇತ್ರದ ಶಾಸಕ ಸ್ವರೂಪ್ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅರಕಲಗೂಡು ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ತಣ್ಣೀರುಹಳ್ಳ ಮಠದ ಮಠಾಧೀಶರಾದ ಶ್ರೀ ವಿಜಯ ಕುಮಾರ್ ಸ್ವಾಮಿಜಿ, ಜವನಹಳ್ಳಿ ಮಠದ ಮಠಾಧೀಶರಾದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಹಾಗೂ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಅಖಿಲಭಾರತ ವೀರಶೈವ ಮಹಾಸಭಾಧ ಅಧ್ಯಕ್ಷ ಎನ್. ಪರಮೇಶ್, ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಶೋಭನ್ ಬಾಬು, ಎಚ್.ಎನ್. ನಾಗೇಶ್, ಹೇಮಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಪಿ. ತಾರಾನಾಥ್, ಯು.ಎಸ್. ಬಸವರಾಜು, ಅವರ ಸಮ್ಮುಖದಲ್ಲಿ ಬೆಳ್ಳಿ ರಥದಲ್ಲಿ ಇರಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿದ್ದವು. ಈ ವೇಳೆ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಮೆರವಣಿಗೆಗೆ ವೀರಶೈವ ಸಮಾಜದ ಮುಖಂಡರು, ಸ್ವಾಮೀಜಿಯವರು ಹಾಗೂ ಹಿರಿಯರು ಎಲ್ಲಾರು ಸೇರಿ ಡಿಸಿ ಕಛೇರಿಯಿಂದ ಹಾಸನಾಂಬ ಕಲಾಕ್ಷೇತ್ರದವರೆಗೂ ಸಾಗುವ ಮೆರವಣಿಗೆಗೆ ಚಾಲನೆ ಕೊಡಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೊಟ್ಟಮೊದಲ ವೀರ ಮಹಿಳೆ, ಹೋರಾಟಗಾರ್ತಿ ಆಗಿದ್ದಾರೆ ಎಂದರು. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಧೀರ ಮಹಿಳೆಯಾಗಿ ಆಗಿನ ಕಾಲದಲ್ಲೇ ಬ್ರಿಟೀಷರ ಕ್ರೌರ್ಯಕ್ಕೆ ಎದೆಗುಂದದೆ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು.