ನರಸಿಂಹರಾಜಪುರಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ 10 ನೇ ತರಗತಿ ವಿದ್ಯಾರ್ಥಿನಿಯರಾದ ಇ.ಪಿ. ದ್ರವ್ಯ ಹಾಗೂ ಬಿ.ಟಿ. ಪ್ರತೀಕ್ಷ ಧಾರವಾಡದಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸೌತಿಕೆರೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಅಜ್ಜಪ್ಪ ತಿಳಿಸಿದ್ದಾರೆ.

ದೀಪ್ತಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ 10 ನೇ ತರಗತಿ ವಿದ್ಯಾರ್ಥಿನಿಯರಾದ ಇ.ಪಿ. ದ್ರವ್ಯ ಹಾಗೂ ಬಿ.ಟಿ. ಪ್ರತೀಕ್ಷ ಧಾರವಾಡದಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸೌತಿಕೆರೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಅಜ್ಜಪ್ಪ ತಿಳಿಸಿದ್ದಾರೆ.

ಈ ಹಿಂದೆ ದೀಪ್ತಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಈ ಇಬ್ಬರು ವಿದ್ಯಾರ್ಥಿನಿ ಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು. ನಂತರ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲೂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ 30 ಜಿಲ್ಲೆಗಳ ಪ್ರೌಢ ಶಾಲೆ ಮಕ್ಕಳು ಭಾಗವಹಿಸಿದ್ದು ಈ ಸ್ಪರ್ಧೆಯಲ್ಲಿ ನರಸಿಂಹರಾಜಪುರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಇ.ಪಿ.ದ್ರವ್ಯ ಹಾಗೂ ಬಿ.ಟಿ.ಪ್ರತೀಕ್ಷ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಯ ಮಟ್ಟಕ್ಕೆ ಆಯ್ಕೆಯಾದ ಈ ಇಬ್ಬರು ವಿದ್ಯಾರ್ಥಿನಿಯರನ್ನು ಶಾಸಕ ಟಿ.ಡಿ.ರಾಜೇಗೌಡ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಮಾಲತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್,ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಅಜ್ಜಪ್ಪ ಅಭಿನಂದಿಸಿದ್ದಾರೆ.