ಸಾರಾಂಶ
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಉತ್ಸವದ ಭಾಗವಾದ ಕಿತ್ತೂರು ವಿಜಯೋತ್ಸವ ವಿಜಯ ಜ್ಯೋತಿ ಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಭಾನುವಾರ ಉಡುಪಿ ಜಿಲ್ಲೆಗೆ ಆಗಮಿಸಿತು.
ಕನ್ನಡಪ್ರಭ ವಾರ್ತೆ ಉಡುಪಿ
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಉತ್ಸವದ ಭಾಗವಾದ ಕಿತ್ತೂರು ವಿಜಯೋತ್ಸವ ವಿಜಯ ಜ್ಯೋತಿ ಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಭಾನುವಾರ ಉಡುಪಿ ಜಿಲ್ಲೆಗೆ ಆಗಮಿಸಿತು.ಈ ಜ್ಯೋತಿಯಾತ್ರೆಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ನಗರದ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿ ರಾಣಿ ಚೆನ್ನಮ್ಮ ಪುತ್ತಳಿಗೆ ಪುಷ್ಪ ಹಾರಾರ್ಪಣೆಗೈದು, ಕಿತ್ತೂರು ರಾಣಿ ಚೆನ್ನಮ್ಮರ ಹೋರಾಟದ ಕಿಚ್ಚನ್ನು ಸ್ಮರಿಸಿದರು.ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ನಗರ ಸಭೆ ಆಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಹಿಂದುಳಿದ ಇಲಾಖೆ ಅಧಿಕಾರಿ ಹಾಕಪ್ಪ ಲಮಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ತಾಲೂಕು ಕ. ಸಾ. ಪ ಅಧ್ಯಕ್ಷ ರವಿರಾಜ್ ಎಚ್. ಪಿ., ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ನರಸಿಂಹ ಮೂರ್ತಿ, ದಿವಾಕರ ಶೆಟ್ಟಿ, ಭುವನಪ್ರಸಾದ್ ಹೆಗ್ಡೆ, ರಂಜಿನಿ, ಜಗನ್ನಾಥ ಪಣಸಾಲೆ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.