ಸಾಧಕರನ್ನು ತಯಾರಿಸುತ್ತಿರುವ ಕೆಎಲ್‌ಇ ಸಂಸ್ಥೆ: ಜಯಾನಂದ ಮುನವಳ್ಳಿ

| Published : Nov 15 2024, 12:33 AM IST

ಸಾಧಕರನ್ನು ತಯಾರಿಸುತ್ತಿರುವ ಕೆಎಲ್‌ಇ ಸಂಸ್ಥೆ: ಜಯಾನಂದ ಮುನವಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಜನಸಾಮಾನ್ಯರಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಪ್ತರ್ಷಿಗಳಿಂದ ಸ್ಥಾಪನೆಗೊಂಡ ಕೆಎಲ್‌ಇ ಸಂಸ್ಥೆ ಇಂದು ದೇಶ-ವಿದೇಶಗಳಲ್ಲಿ ಕೀರ್ತಿ ಹರಡುತ್ತಿದೆ ಎಂದು ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಜನಸಾಮಾನ್ಯರಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಪ್ತರ್ಷಿಗಳಿಂದ ಸ್ಥಾಪನೆಗೊಂಡ ಕೆಎಲ್‌ಇ ಸಂಸ್ಥೆ ಇಂದು ದೇಶ-ವಿದೇಶಗಳಲ್ಲಿ ಕೀರ್ತಿ ಹರಡುತ್ತಿದೆ ಎಂದು ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.

ಬುಧವಾರ ನಗರದ ಕೆಎಲ್‌ಇ ಸಂಸ್ಥೆಯ ಸಿ.ಎಸ್. ಅಂಗಡಿ ಪದವಿ ಮಹಾವಿದ್ಯಾಲಯದಲ್ಲಿ ಕೆಎಲ್‌ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಿಲ್ಲಾಮಟ್ಟದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಟ್ಯಾಲೆಂಟ್ ಎಕ್ಸಫೋ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕೆಎಲ್‌ಇ ಸಂಸ್ಥೆ ಇಂದು ಡಾ.ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆಗೆ ಉದ್ಯೋಗ ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಪ್ರತಿವರ್ಷ 200 ವಿದ್ಯಾರ್ಥಿಗಳಿಗೆ ಉದ್ಯೋಗ ಒದಗಿಸುತ್ತಿದೆ. ಪ್ರತಿಭಾವಂತ ಬಡವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿ ಅವರನ್ನು ಸಾಧಕರನ್ನಾಗಿ ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದು, ಅದನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ತಹಸೀಲ್ದಾರ್ ಡಾ.ಮೋಹನ ಭಸ್ಮೆ ಹಾಗೂ ಛಾಯಾಶ್ರೀ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಬಿ.ಪ್ರಭಾಕರ (ಪ್ರವೀಣ್) ಅವರನ್ನು ಸತ್ಕರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜಿತ ಮನ್ನಿಕೇರಿ, ಜಿ.ಬಿ. ಬಳಗಾರ, ಕೆಎಲ್‌ಇ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎಂ.ಡಿ. ಚುನಮರಿ, ಆಡಳಿತಾಧಿಕಾರಿ ಜಿ.ಎಂ ಅಂದಾನಿ, ಓಂಪ್ರಕಾಶ ಅಂಗಡಿ, ಪ್ರಾಚಾರ್ಯ ಕೆ.ಬಿ. ವೆವುಂಡಿಮಠ, ಎಂ.ಎ. ಪಾಟೀಲ ಇತರರು ಇದ್ದರು.