ಸಂಡೂರಿನ ಸಾರ್ವಜನಿಕ ಆಸ್ಪತ್ರೆಗೆ ಕೆಎಂಇಆರ್‌ಸಿ ಅಧಿಕಾರಿಗಳ ಭೇಟಿ

| Published : Apr 04 2025, 12:45 AM IST

ಸಾರಾಂಶ

ಅಧಿಕಾರಿಗಳ ತಂಡ ಬುಧವಾರ ಪಟ್ಟಣದ ನೂರು ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ, ನಿರ್ಮಾಣ ಹಂತದಲ್ಲಿರುವ ರಾಜೀವ್ ಗಾಂಧಿ ವಸತಿ ಯೋಜನೆಯ ಗುಂಪುಮನೆಗಳು ಹಾಗೂ ಸ್ಮಯೋರ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿತು.

ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕುರಿತು ಚರ್ಚೆ

ಕನ್ನಡಪ್ರಭ ವಾರ್ತೆ ಸಂಡೂರುಕೆಎಂಇಆರ್‌ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ದ ಮೇಲ್ವಿಚಾರಣಾ ಪ್ರಾಧಿಕಾರದ ಸಲಹೆಗಾರ ಬಾಲಸುಬ್ರಮಣಿಯನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಬುಧವಾರ ಪಟ್ಟಣದ ನೂರು ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ, ನಿರ್ಮಾಣ ಹಂತದಲ್ಲಿರುವ ರಾಜೀವ್ ಗಾಂಧಿ ವಸತಿ ಯೋಜನೆಯ ಗುಂಪುಮನೆಗಳು ಹಾಗೂ ಸ್ಮಯೋರ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿತು.೨೫೦ ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಚರ್ಚೆ:

೧೦೦ ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಯ ಭೇಟಿಯ ನಂತರ ಕೆಎಂಇಆರ್‌ಸಿ ಅಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿ ರಮೇಶ್ ಬಾಬು ವೈ., ತಾಲೂಕು ವೈದ್ಯಾಧಿಕಾರಿ ಟಿ. ಭರತ್‌ಕುಮಾರ್ ಅವರೊಂದಿಗೆ ಈಗಿರುವ ಆಸ್ಪತ್ರೆಯಲ್ಲಿನ ಮೂಲ ಸೌಕರ್ಯಗಳು, ವೈದ್ಯರು ಹಾಗೂ ಸಿಬ್ಬಂದಿಯ ಕುರಿತು ಚರ್ಚಿಸಿದರಲ್ಲದೆ, ಮಾಹಿತಿ ಪಡೆದರು. ಈಗಿನ ಜನಸಂಖ್ಯೆ ಹಾಗೂ ಅಗತ್ಯತೆಗೆ ಅನುಗುಣವಾಗಿ ೧೦೦ ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಯನ್ನು ೨೫೦ ಹಾಸಿಗೆಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಯೋಜಿಸಲಾಗಿದ್ದು, ಅದಕ್ಕೆ ಬೇಕಾಗುವ ಜಮೀನು, ವೈದ್ಯರು, ಸಿಬ್ಬಂದಿ, ಮೂಲ ಸೌಕರ್ಯಗಳ ಕುರಿತು ವರದಿ ತಯಾರಿಸಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಕೆಎಂಇಆರ್‌ಸಿ ಮೇಲ್ವಿಚಾರಣಾ ಪ್ರಾಧಿಕಾರದ ಸಲಹೆಗಾರರು ಸೂಚಿಸಿದರು.

ಪಟ್ಟಣದಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದ ಯೋಜನೆ ಅಡಿಯಲ್ಲಿ ನಿರ್ಮಿಸಲಾಗಿರುವ ಗುಂಪು ಮನೆಗಳನ್ನು ಅಧಿಕಾರಿಗಳು ವೀಕ್ಷಿಸಿದರು. ಇದೇ ಸಂದರ್ಭ ಸ್ಮಯೋರ್ ಆರೋಗ್ಯ ಕೇಂದ್ರಕ್ಕೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ತಾಪಂ ಇಒ ರೇಣುಕಾಚಾರ್ಯಸ್ವಾಮಿ, ವಲಯ ಅರಣ್ಯಾಧಿಕಾರಿ ದಾದಾ ಖಲಂದರ್ ಉಪಸ್ಥಿತರಿದ್ದರು.