ಸಾರಾಂಶ
ಭಾರತೀಯರಾದ ನಾವು ಸ್ವಾತಂತ್ರ‍್ಯ ಸಿಕ್ಕ ದಿನವನ್ನು ಪ್ರತಿ ದಿನ ನೆನೆದು ಅದರ ಮಹತ್ವ ತಿಳಿಯಬೇಕು ಎಂದು ಅಗ್ರಹಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತಾಮಂಜುನಾಥ್ ಹೇಳಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ಭಾರತೀಯರಾದ ನಾವು ಸ್ವಾತಂತ್ರ‍್ಯ ಸಿಕ್ಕ ದಿನವನ್ನು ಪ್ರತಿ ದಿನ ನೆನೆದು ಅದರ ಮಹತ್ವ ತಿಳಿಯಬೇಕು ಎಂದು ಅಗ್ರಹಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತಾಮಂಜುನಾಥ್ ಹೇಳಿದರು.ಅಗ್ರಹಾರ ಗ್ರಾಮ ಪಂಚಾಯಿತಿ ಆವರಣದಲ್ಲಿ ೭೮ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಸ್ವತಂತ್ರಕ್ಕಾಗಿ ಹೋರಾಡಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಎಲ್ಲಾ ವೀರರನ್ನು ಪ್ರತಿ ದಿನ ನೆನೆದು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಸ್ತುತ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಸ್ವಾತಂತ್ರ್ಯೋತ್ಸವ ಆಚರಣೆಯ ಒಂದು ದಿನ ಮಾತ್ರ ನೆನೆಯುತ್ತಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.ಉಪಾಧ್ಯಕ್ಷರಾದ ಸರಸ್ವತಿ ಮಂಜುನಾಥ್ ಮಾತನಾಡಿ, ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಬಂದು ಇಂದಿಗೆ ೭೮ ವರ್ಷಗಳು ಕಳೆದಿದೆ. ನಮ್ಮ ದೇಶದ ಸ್ವತಂತ್ರಕ್ಕಾಗಿ ಮಹಾನ್ ವ್ಯಕ್ತಿಗಳ ಬಲಿದಾನವಾಗಿದೆ. ಸ್ವತಂತ್ರ ಹೋರಾಟಗಾರರು ದೇಶದ ಒಳಿತಿಗಾಗಿ ಹೋರಾಡಿ ಸ್ವತಂತ್ರವನ್ನು ತಂದುಕೊಟ್ಟಿದ್ದಾರೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಗನಾಥ್ ಮಾತನಾಡಿ, ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಪ್ರತಿದಿನ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆದು ನಾವು ಪ್ರತಿ ಹೆಜ್ಜೆಯನ್ನು ಇಡಬೇಕು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದರು .ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಹಿರಿಯರು ಮುಖಂಡರು ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.