ಶೈಕ್ಷಣಿಕ ಪ್ರವಾಸಗಳಿಂದ ಜ್ಞಾನ ಸಾಧ್ಯ: ಚಂದ್ರಶೇಖರ ದಂಡಿನ್

| Published : Feb 02 2024, 01:07 AM IST

ಶೈಕ್ಷಣಿಕ ಪ್ರವಾಸಗಳಿಂದ ಜ್ಞಾನ ಸಾಧ್ಯ: ಚಂದ್ರಶೇಖರ ದಂಡಿನ್
Share this Article
  • FB
  • TW
  • Linkdin
  • Email

ಸಾರಾಂಶ

ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲಾವರಣದಲ್ಲಿ ನಡೆದ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಕಾಂಗ್ರೆಸ್ ಮುಖಂಡರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ದೇಶ ಸುತ್ತು, ಕೋಶ ಓದು ಎಂಬ ಮಾತಿನಂತೆ ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿ ಜೀವನದ ಪ್ರಮುಖ ಜ್ಞಾನದ ಆಕಾರಗಳಾಗಿವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಹೇಳಿದರು.

ಪಟ್ಟಣದ ಬಾಲಕಿಯರ ಪ್ರೌಢ ಶಾಲಾವರಣದಲ್ಲಿ ನಡೆದ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಪಪಂ ಸದಸ್ಯ ಸಿದ್ರಾಮಪ್ಪ ಮುದಗಲ್ ಮಾತನಾಡಿ, ಮಕ್ಕಳ ಅಧ್ಯಯನದ ಜೊತೆಗೆ ಶೈಕ್ಷಣಿಕ ಸ್ಥಳ ಭೇಟಿ, ವಿದ್ಯಾರ್ಥಿಗಳಿಗೆ ಜ್ಞಾನದ ಸ್ಪಷ್ಟತೆಗೆ ದಾರಿ ಮಾಡಿ ಕೊಡುತ್ತವೆ. ಪ್ರವಾಸಕ್ಕೆ ಹೊರಟ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶುಭ ಹಾರೈಸಿದರು.

ನಂತರ ಬಿಆರ್‌ಪಿ ಕಾಂತೇಶ ಹಲಗಿಮನಿ ಮಾತನಾಡಿ, ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳುವ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳ ವಿಕ್ಷಣೆ ಮಾಡಲು ಅವಕಾಶ ನೀಡಲಾಗಿದೆ. ಸುರಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆ ಎಸ್ಸಿ, ಎಸ್ಟಿ ಹಾಗೂ ಒಬಿಸಿ 8ನೇ ತರಗತಿ ವಿದ್ಯಾರ್ಥಿಗಳು ಒಟ್ಟು 151 ಗಂಡು, 36 ಹೆಣ್ಣು, ವಿದ್ಯಾರ್ಥಿಗಳು ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಮಕ್ಕಳಿಗೆ ಬೇಕಾದ ಪ್ರವಾಸಿ ಬ್ಯಾಗ್, ಟೋಪಿ, ಟೀಶರ್ಟ್, ಪೆನ್ ಮತ್ತು ನೋಟಬುಕ್‌ ವಿತರಿಸಲಾಯಿತು.

ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್, ಬಾಪುಗೌಡ ಪಾಟೀಲ್, ಬಸವರಾಜ ಸಜ್ಜನ್, ರಮೇಶ ವಾಲಿ, ಮುದಕಪ್ಪ ಆನೇಕಿ, ಚನ್ನಯ್ಯಸ್ವಾಮಿ ಹಿರೇಮಠ ಸೇರಿ ಶಿಕ್ಷಕರು ಹಾಗೂ ಶಿಕ್ಷಕಿಯರು ಇದ್ದರು.