ಕೊಡಗರಹಳ್ಳಿ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಭರ್ಜರಿ ಸ್ವಾಗತ

| Published : Feb 09 2024, 01:46 AM IST / Updated: Feb 09 2024, 03:41 PM IST

ಕೊಡಗರಹಳ್ಳಿ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಭರ್ಜರಿ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗರಹಳ್ಳಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಪಂಚಾಯಿತಿ ಅಧ್ಯಕ್ಷೆ ಹಾಗೂ ಅಧಿಕಾರಿಗಳು ಸ್ವಾಗತಿಸಿದರು. ವಿವಿಧ ಶಾಲಾ ಮಕ್ಕಳು ಮೆರವಣಿಗೆ ಮೂಲಕ ಸಾಗಿ ಜಾಗೃತಿ ಮೂಡಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸಂವಿಧಾನ ಜಾಗೃತಿ ಜಾಥಾ ರಥ ಗುರುವಾರ ಕೊಡಗರಹಳ್ಳಿಗೆ ಆಗಮಿಸಿತು. ಕೊಡಗರಹಳ್ಳಿಯ ಉಪ್ಪುತೋಡು ಬಳಿ ಗ್ರಾ.ಪಂ. ಅಧ್ಯಕ್ಷೆ ಎನ್.ಸಿ.ನಿರುತ ಬೆಳ್ಳಿಯಪ್ಪ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಅಧಿಕಾರಿ ಡಾ.ಸತೀಶ್‌ ಕುಮಾರ್ ಮತ್ತಿತರರು ಸ್ವಾಗತ ಕೋರಿದರು. ವಿವಿಧ ಶಾಲಾ ಮಕ್ಕಳು ಘೋಷಣೆಯೊಂದಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ದೇಶದ ಸಂವಿಧಾನದ ಬಗ್ಗೆ ಮಾಹಿತಿ ನೀಡಿದರು.

ಕೊಡಗರಹಳ್ಳಿಯ ಶಾಂತಿನಿಕೇತನ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾ ಸಭೆಯನ್ನು ಉದ್ದೇಶಿಸಿ ಶಾಂತಿನಿಕೇತನ ಶಾಲಾ ಅಧ್ಯಾಪಕಿ ಮಮತಾ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನ ಶೇಷ್ಠ ಸಂವಿಧಾನಗಳಲ್ಲಿ ಒಂದು. ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು, ಕರ್ತವ್ಯದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದ್ದು, ನಾವೆಲ್ಲರೂ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.

ಸಂವಿಧಾನ ಜಾಗೃತಿ ಜಾಥಾದ ನೋಡಲ್ ಅಧಿಕಾರಿ ಸೋಮವಾರಪೇಟೆ ತಾಲೂಕಿನ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕಲಾಮಣಿ, ಬಸವಿ, ನೀತಾ ಹರೀಶ್, ರೂಬಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಧನ್ಯ, ಅಣ್ಣಪ್ಪ, ಕೆ.ಎಸ್.ಧನಂಜಯ, 7ನೇ ಹೊಸಕೋಟೆ ಗ್ರಾ.ಪಂಚಾಯಿತಿ ಅಧ್ಯಕ್ಷ ಜೋಸೆಫ್ ಸೇರಿದಂತೆ ಇನ್ನಿತತರು ಉಪಸ್ಥಿತರಿದ್ದರು.ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಎನ್.ಸಿ.ನಿರುತ ಬೆಳ್ಳಿಯಪ್ಪ ವಹಿಸಿದ್ದರು.

ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಇಂದೂಧರ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ಮಹಿಳಾ ಸದಸ್ಯರು ಹಾಗೂ ಸಿಬ್ಬಂದಿ ದೇಶಭಕ್ತಿ ಗೀತೆಯೊಂದಕ್ಕೆ ನೃತ್ಯ ಪ್ರದರ್ಶನ ನೀಡಿದರು.

ಕಂಬಿಬಾಣೆಗೆ ಆಗಮನ: ಕಂಬಿಬಾಣೆಯಲ್ಲಿ ಜಾಥಾಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ಜಾಗೃತಿ ಜಾಥಾದ ರಥ ಆಗಮಿಸುತ್ತಿದ್ದಂತೆ ಶಾಲಾ ಮಕ್ಕಳ ವಾದ್ಯಗೋಷ್ಟಿ, ಬೈಕ್ ಹಾಗೂ ಆಟೋ ಜಾಥಾ ಮತ್ತು ಸ್ವ ಸಹಾಯ ಸಂಘದ ಸದಸ್ಯರು ಕಲಶದೊಂದಿಗೆ ರಥಕ್ಕೆ ಸ್ವಾಗತ ಕೋರಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಂಕರ ಎನ್. ರಥಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತ ಕೋರಿದರು.

7ನೇ ಹೊಸಕೋಟೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸೋಮಯ್ಯ ಮುಖ್ಯ ಭಾಷಣಕಾರರಾಗಿ, ಸಂವಿಧಾನದ ರಚನೆ ಪ್ರಾಮುಖ್ಯತೆ ಮೊದಲಾದ ವಿಷಯಗಳ ಬಗ್ಗೆ ವಿಷಯ ಮಂಡನೆ ಮಾಡಿದರು. ಗ್ರಾಮಪಂಚಾಯಿತಿ ಉಪಾಧ್ಯಕ್ಷ ಶಂಕರ ಎನ್. ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ಗ್ರಾಮಪಂಚಾಯಿತಿ ಸದಸ್ಯರಾದ ಮಧು ನಾಗಪ್ಪ, ಅಶ್ವಿನಿ, ಪಿ.ಡಿ.ಒ ಮಧುಮತಿ ಕೆ.ಎಲ್., ಸಿ.ಆರ್.ಪಿ. ಸೀಮಾ ಪ್ರಸನ್ನ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಕಬೀರ್ ಹಾಜರಿದ್ದರು.

ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.