ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಮತ್ತು ಹನುಮಾನ್‌ ಜಯಂತಿ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗರಹಳ್ಳಿ ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ ಹನುಮಾನ್ ಜಯಂತಿಯನ್ನು ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.

ಮಂಗಳವಾರ ಬೆಳಗ್ಗೆ 8 ಗಂಟೆಗೆ ಪುಣ್ಯಾಹ, ಗಣಪತಿ ಹೋಮ, 9.30 ಗಂಟೆಗೆ ನವಕಲಶ ಪೂಜೆ, 10.30ಗಂಟೆಗೆ ಕಲಶಾಭಿಷೇಕ, 12.30ಕ್ಕೆ ಮಂತ್ರಾಕ್ಷತೆ, ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆಯನ್ನು ನೆರವೇರಿಸಲಾಯಿತು.

ದಿನದ ವಿಶೇಷ ಪೂಜಾ ಕೈಂಕರ್ಯಗಳನ್ನು ದೇವಾಲಯದ ಆರ್ಚಕರಾದ ನರಸಿಂಹ ಭಟ್ ಹಾಗೂ ಗಣೇಶ್ ಶರ್ಮಾ ನೆರವೇರಿಸಿದರು.

ಇದೇ ಸಂದರ್ಭ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಹನುಮಾನ್ ಜಯಂತಿ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ಜಯಂತಿಯಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ನೆರವೇರಿಸಲಾಯಿತು.