ಸಾರಾಂಶ
ವಿಶ್ವಕರ್ಮ ಯೋಜನೆಯ ನಾಮನಿರ್ದೇಶಿತ ಸದಸ್ಯ ನಾಗೇಶ್ ಕುಂದಲ್ವಾಡಿ ಹಾಗೂ ರಾಬಿನ್ ದೇವಯ್ಯ ಸಭೆಯಲ್ಲಿ ಮಾತನಾಡಿ, ವಿಶ್ವಕರ್ಮ ಯೋಜನೆಯಡಿಯಲ್ಲಿ ಫಲಾನುಭವಿಗಳ ಯಶೋಗಾಥೆ ಒದಗಿಸುವಂತೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ, ಪ್ರಧಾನಮಂತ್ರಿಯವರ ವಿಶ್ವಕರ್ಮ ಯೋಜನೆ ಜಿಲ್ಲಾಮಟ್ಟದ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು.ವಿಶ್ವಕರ್ಮ ಯೋಜನೆಯ ನಾಮನಿರ್ದೇಶಿತ ಸದಸ್ಯ ನಾಗೇಶ್ ಕುಂದಲ್ವಾಡಿ ಹಾಗೂ ರಾಬಿನ್ ದೇವಯ್ಯ ಸಭೆಯಲ್ಲಿ ಮಾತನಾಡಿ, ವಿಶ್ವಕರ್ಮ ಯೋಜನೆಯಡಿಯಲ್ಲಿ ಫಲಾನುಭವಿಗಳ ಯಶೋಗಾಥೆ ಒದಗಿಸುವಂತೆ ತಿಳಿಸಿದರು.ಸಭೆಯಲ್ಲಿ ಪ್ರಧಾನಮಂತ್ರಿಯವರ ಉದ್ಯೋಗ ಸೃಜನೆ ಯೋಜನೆಯಡಿಯಲ್ಲಿ ನಿಗದಿತ ಗುರಿ ನೀಡಿ ಪ್ರಗತಿ ಸಾಧಿಸಿರುವ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮತ್ತಷ್ಟು ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಕುಂದುಕೊರತೆ, ಚಟುವಟಿಕೆ ಹಾಗೂ ಬದಲಾವಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಕೈಗಾರಿಕಾ ಇಲಾಖೆ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು, ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದರ ಜತೆಗೆ ಉದ್ದಿಮೆ ಪ್ರಾರಂಭಿಸಲು ಹೆಚ್ಚಿನ ಅನುಕೂಲ ಮಾಡಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಶಿವಲಿಂಗಯ್ಯ ಹಾಗೂ ಉಪ ನಿರ್ದೇಶಕರಾದ ಉಮೇಶ್ವಿ ಹಾಜರಿದ್ದು, ಇಲಾಖೆಯ ಕಾರ್ಯಕ್ರಮದಲ್ಲಿ ಆಗಿರುವ ಪ್ರಗತಿಯನ್ನು ಸಭೆಗೆ ವಿವರಿಸಿದರು.ಕೈಗಾರಿಕೆಗಳ ಬೆಳವಣಿಗೆ ಪೂರಕವಾದ ಸಂಸ್ಥೆ, ಇಲಾಖೆಗಳಾದ ಕಾಸಿಯಾ, ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳು, ಪ್ರತಿನಿಧಿಗಳು ಭಾಗವಹಿಸಿದರು.