ಸಾರಾಂಶ
ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಂಗಳವಾರ ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೊಡಗಿನಲ್ಲಿ ಕೆ.ಎಂ.ಬಿ.ಗಣೇಶ್ ರಾಜೀನಾಮೆ ಬಳಿಕ ತೆರವಾಗಿರುವ ಜಿಲ್ಲಾಧ್ಯಕ್ಷ ಹುದ್ದೆ ತೆರವಾಗಿದೆ. ಜ.15 ರೊಳಗಾಗಿ ಸಂಕ್ರಾಂತಿ ಸಂದರ್ಭವೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಂಕ್ರಾಂತಿ ವೇಳೆಗೆ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕ ಮಾಡುವುದಾಗಿ ಜೆಡಿಎಸ್ ವರಿಷ್ಟ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಂಗಳವಾರ ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೊಡಗಿನಲ್ಲಿ ಕೆ.ಎಂ.ಬಿ.ಗಣೇಶ್ ರಾಜೀನಾಮೆ ಬಳಿಕ ತೆರವಾಗಿರುವ ಜಿಲ್ಲಾಧ್ಯಕ್ಷ ಹುದ್ದೆ ತೆರವಾಗಿದೆ. ಜ.15 ರೊಳಗಾಗಿ ಸಂಕ್ರಾಂತಿ ಸಂದರ್ಭವೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು.ಕೊಡಗಿನಲ್ಲಿ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಯವಾಗಿ ಗಮನಿಸುತ್ತಿದ್ದೇನೆ. ಜೆಡಿಎಸ್ ನ ನಿಷ್ಠಾವಂತರೊಂದಿಗೆ ಚರ್ಚಿಸಿ ಅವರ ಅಭಿಪ್ರಾಯ ಪಡೆದಿರುವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲವಿಗೆ ಸೂಕ್ತವಾಗಬಲ್ಲ ಸಮರ್ಥ ಅಧ್ಯಕ್ಷರನ್ನೇ ಆಯ್ಕೆ ಮಾಡುವೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರೊಂದಿಗೆ ಕೂಡ ಕುಮಾರಸ್ವಾಮಿ ಚರ್ಚಿಸಿದರು.