ಮೈಸೂರು ವಿಭಾಗ ಮಟ್ಟದ ೧೭ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸತತ ೪ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಆಡಳಿತ ಕೊಡಗು ಮತ್ತು ಜ್ಞಾನ ಭಾರತಿ ಪ್ರೌಢಶಾಲೆ ಕುಶಾಲನಗರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ೧೭ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸತತ ೪ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರಾದ ಡ್ಯಾಝಲ್ ಕುಟಿನ್ಹ, ಸನ್ನಿಧಿ, ಹಾರ್ದಿಕ ಪಿ, ಜೆನಿಟ ಸಿಂಧು ಪಸನ್ನ, ಧನ್ಯಶ್ರೀ, ಜನನಿ ಪಿ ಗೌಡ, ಆಯಿಷತ್ ಶಹೀಮ, ಫಾತಿಮತ್ ಅಫ್ರಾ, ಹೆಚ್ ನಮೃತಾ ಶೆಟ್ಟಿ, ದಿಶಾ ಸುನಿಲ್ ಸಾಲಿಯಾನ್ ಶಾನ್ವಿ, ಮನಸ್ವಿ, ಶ್ರೇಯ, ನಿಧಿಶ್ರೀ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಡ್ಯಾಝಲ್ ಕುಟಿನ್ಹಾ ಸವ್ಯಸಾಚಿ ಆಟಗಾರ್ತಿ ಹಾಗೂ ಹಾರ್ದಿಕ ಪಿ ಉತ್ತಮ ದಾಳಿಗಾರ್ತಿ ಪ್ರಶಸ್ತಿ ಪಡೆದುಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿದ್ದಾರೆ.